ಕರ್ನಾಟಕ

karnataka

ETV Bharat / state

ಕೇಂದ್ರ ಸರ್ಕಾರದ ಯೋಜನೆಗಳ ಅನುಷ್ಠಾನ: ಬೆಳಗಾವಿ ಜಿಲ್ಲೆಗೆ 10ನೇ ರ‍್ಯಾಂಕ್

ಕೇಂದ್ರ ಸರ್ಕಾರದ ಯೋಜನೆಗಳ ಅನುಷ್ಠಾನದಲ್ಲಿ ಬೆಳಗಾವಿ ಜಿಲ್ಲೆಗೆ 10ನೇ ಶ್ರೇಯಾಂಕ.

ಬೆಳಗಾವಿ
ಬೆಳಗಾವಿ

By

Published : Sep 25, 2022, 9:10 PM IST

ಬೆಳಗಾವಿ: ಕೇಂದ್ರ ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿ‌ಯಾಗಿ ಅನುಷ್ಠಾನಗೊಳಿಸುವ ಮೂಲಕ ಬೆಳಗಾವಿ ಜಿಲ್ಲೆ ದೇಶದಲ್ಲಿಯೇ ಹತ್ತನೇ ರ್ಯಾಂಕ್ ಗಳಿಸಿದೆ. ಸೆ.26ರಂದು ನವದೆಹಲಿಯಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರು ಗೌರವ ಪ್ರದಾನ ಸ್ವೀಕರಿಸಲಿದ್ದಾರೆ.

ಕೇಂದ್ರ ಸರ್ಕಾರದ ವತಿಯಿಂದ ಏಪ್ರಿಲ್ 12, 2022 ರಿಂದ ಹಮ್ಮಿಕೊಳ್ಳಲಾಗಿದ್ದ ಆಝಾದಿಸೇ ಅಂತ್ಯೋದಯ ತಕ್ (ಎ.ಎಸ್.ಎ.ಟಿ) ಅಭಿಯಾನವು 15ನೇ ಆಗಸ್ಟ್ 2022 ರಂದು ಮುಕ್ತಾಯಗೊಂಡಿತ್ತು. ಈ ಅಭಿಯಾನದಲ್ಲಿ ದೇಶದ 27 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಒಟ್ಟು 75 ಜಿಲ್ಲೆಗಳು ಭಾಗವಹಿಸಿದ್ದವು.

ಈ ಅಭಿಯಾನದಲ್ಲಿ ಕೇಂದ್ರ ಸರ್ಕಾರದ ಆಯ್ದ 9 ಇಲಾಖೆಗಳ 17 ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಮೂಲಕ ನಾಗರಿಕರಿಗೆ ಹಾಗೂ ಫಲಾನುಭವಿಗಳಿಗೆ ಅತ್ಯುತ್ತಮ ಸೇವೆಯನ್ನು ಒದಗಿಸಿ ಶೇ. 84-85 ರಷ್ಟು ಸಾಧನೆಯನ್ನು ಬೆಳಗಾವಿ ಜಿಲ್ಲೆಯು ದಾಖಲಿಸಿತ್ತು.

ಬೆಳಗಾವಿ ಜಿಲ್ಲೆಗೆ 10ನೇ ರ‍್ಯಾಂಕ್

ಬೆಳಗಾವಿ ಜಿಲ್ಲೆಯ ಈ ವಿಶಿಷ್ಟ ಸಾಧನೆಯನ್ನು ಗುರುತಿಸಿದ ಕೇಂದ್ರ ಸರ್ಕಾರವು ಗೌರವ ಸನ್ಮಾನ ಹಾಗೂ ಪ್ರಶಸ್ತಿ ಸ್ವೀಕರಿಸಲು ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್​, ಜಿಲ್ಲಾ ಪಂಚಾಯತ್​ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಹೆಚ್. ವಿ ಹಾಗೂ ಜಿಪಂ ಯೋಜನಾ ನಿರ್ದೇಶಕ ರವಿ ಬಂಗಾರೆಪ್ಪನವರ ಅವರನ್ನು ನವದೆಹಲಿಗೆ ಆಹ್ವಾನಿಸಿದೆ.

ನವದೆಹಲಿಯ ಹ್ಯಾಬಿಟ್ಯಾಟ್ ಸೆಂಟರ್​ನಲ್ಲಿ ಸೆಪ್ಟೆಂಬರ್ 26ರಂದು ಸನ್ಮಾನ ಸಮಾರಂಭ ನಡೆಯಲಿದೆ. ಆರೋಗ್ಯ, ಗ್ರಾಮೀಣಾಭಿವೃದ್ಧಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಕಾರ್ಮಿಕ ಇಲಾಖೆ ಸೇರಿದಂತೆ ಒಟ್ಟಾರೆ 9 ಇಲಾಖೆಗಳ 17 ಯೋಜನೆಗಳ ಪ್ರಗತಿಯನ್ನು ಪರಿಗಣಿಸಿ ರ್ಯಾಂಕ್ ನೀಡಲಾಗಿದೆ.

ಓದಿ:2.30 ನಿಮಿಷದಲ್ಲಿ ನಾಡಗೀತೆ ಹಾಡಲು ಅಧಿಕೃತ ಆದೇಶ ಹೊರಡಿಸಿದ ಸರ್ಕಾರ

ABOUT THE AUTHOR

...view details