ಬೆಳಗಾವಿ: ಸಂಭಾವ್ಯ ಪ್ರವಾಹ ಎದುರಿಸುವ ನಿಟ್ಟಿನಲ್ಲಿ, ಬೆಳಗಾವಿ ಜಿಲ್ಲಾಧಿಕಾರಿ ಎಸ್.ಬಿ. ಬೊಮ್ಮನಹಳ್ಳಿ ಹಾಗೂ ಉನ್ನತ ಅಧಿಕಾರಿ ಎಸಿ ಕರಲಿಂಗನವರ್ ನೇತೃತ್ವದಲ್ಲಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪ್ರವಾಸ ಮಂದಿರದಲ್ಲಿ ಪ್ರವಾಹ ನಿಯಂತ್ರಣ ಕುರಿತ ಸಭೆ ನಡೆಸಿದ್ದಾರೆ. ಜೊತೆಗೆ ಮುಂಜಾಗೃತಾ ಕ್ರಮಗಳ ಬಗ್ಗೆ ಪರಾಮರ್ಶೆ ನಡೆದಿರುವ ಬಗ್ಗೆ ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿಗಳು ಪ್ರಕಟನೆ ಹೊರಡಿಸಿದ್ದಾರೆ.
ಸಭೆಯ ನಂತರ ಮಾಧ್ಯಮದರೊಂದಿಗೆ ಮಾತನಾಡಿದಜಿಲ್ಲಾಧಿಕಾರಿ ಎಸ್.ಬಿ. ಬೊಮ್ಮನಹಳ್ಳಿ, ಕೃಷ್ಣಾ ನದಿಗೆ 3 ಲಕ್ಷ ಕ್ಯೂಸೆಕ್ಸ್ ನೀರು ಹರಿದು ಬರಲಿದೆ. ಚಿಕ್ಕೋಡಿ ಜಿಲ್ಲಾ ವ್ಯಾಪ್ತಿಯಲ್ಲಿ 41 ಗ್ರಾಮಗಳು ಪ್ರವಾಹ ಪಿಡಿತವಾಗುವ ಲಕ್ಷಣವಿದ್ದು, ಈಗಾಗಲೇ 10 ಜನ ವಸತಿ ಪ್ರದೇಶಗಳನ್ನು ಸ್ಥಳಾಂತರಿಸಲಾಗಿದೆ. ರವಿವಾರ ಮಧ್ಯಾಹ್ನದ ವೇಳೆಗೆ 2 ಎನ್ಡಿಆರ್ಎಫ್ ತಂಡ ಚಿಕ್ಕೋಡಿಗೆ ಆಗಮಿಸಲಿದೆ. 60 ಸಿಬ್ಬಂದಿಗಳ ಎನ್ಡಿಆರ್ಎಫ್ ತಂಡ ರಕ್ಷಣಾ ಕಾರ್ಯಕ್ಕೆ 25 ಬೋಟ್ಗಳನ್ನು ಬಳಿಸಲಿದೆ. ಜೊತೆಗೆ, ತುರ್ತು ಪರಿಸ್ಥಿತಿ ನಿರ್ವಹಣೆಗೆ 24X7 ಹೆಲ್ಪ್ಲೈನ್ ತೆರೆಯಲಾಗಿದೆ. ಭಾರತೀಯ ಸೇನೆ, ರಾಜ್ಯ, ಕೇಂದ್ರ ವಿಪತ್ತು ನಿರ್ವಹಣಾ ತಂಡದಿಂದ ಕಾರ್ಯಾಚರಣೆ ನಡೆಸಲಾಗುವುದೆಂದು ಮಾಹಿತಿ ನೀಡಿದರು.