ಬೆಳಗಾವಿ:ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹಾವೇರಿಯಲ್ಲಿರುವ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಜಿಲ್ಲೆಯಿಂದ ಹೊರಟ 30ಕ್ಕೂ ಹೆಚ್ಚು ರೈತರನ್ನು ಹಿರೇಬಾಗೇವಾಡಿ ಟೋಲ್ ಗೇಟ್ ಬಳಿ ತಡೆದ ಪೊಲೀಸರು ವಶಕ್ಕೆ ಪಡೆದರು.
ಬೆಳಗಾವಿ: ಸಿಎಂ ಮನೆಗೆ ಮುತ್ತಿಗೆ ಹಾಕಲು ಹಾವೇರಿಗೆ ಹೊರಟ ರೈತರು ಪೊಲೀಸ್ ವಶಕ್ಕೆ - ಬಂಧಿಸಿದ ಪೊಲೀಸರು
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹಾವೇರಿಯಲ್ಲಿರುವ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಹೊರಟ ರೈತರನ್ನು ಪೊಲೀಸರು ವಶಕ್ಕೆ ಪಡೆದರು.
ಸಿಎಂ ಮನೆ ಮುತ್ತಿಗೆಗೆ ಹೊರಟಿದ್ದ ರೈತರನ್ನು ವಶಕ್ಕೆ ಪಡೆದ ಬೆಳಗಾವಿ ಪೊಲೀಸರು
'ವಿವಿಧ ಬೆಳೆಗಳಿಗೆ ಖರೀದಿ ಕೇಂದ್ರ ತೆರೆಯಬೇಕು ಎನ್ನುವುದೂ ಸೇರಿದಂತೆ ನ್ಯಾಯಯುತ ಬೇಡಿಕೆಗಳ ಈಡೇರಿಸುವಂತೆ ನಾವು ಆಗ್ರಹಿಸುತ್ತಿದ್ದೇವೆ. ಶಾಂತಿಯುತವಾಗಿ ತೆರಳುತ್ತಿದ್ದಾಗ ಪೊಲೀಸರು ನಮ್ಮನ್ನು ತಡೆದು ವಶಕ್ಕೆ ಪಡೆದಿದ್ದಾರೆ. ಈಗಾಗಲೇ ಶಿಗ್ಗಾಂವಿಗೆ ಸಾಕಷ್ಟು ರೈತರು ತೆರಳಿದ್ದಾರೆ. ಪೊಲೀಸರು ನಮ್ಮ ಹೋರಾಟ ಹತ್ತಿಕ್ಕುವ ಕೆಲಸ ಮಾಡ್ತಿದ್ದಾರೆ' ಎಂದು ರೈತ ಮುಖಂಡ ಚೂನಪ್ಪ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ:ಸಿಎಂ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ ಸೇರಿದ ಬಸವರಾಜ ಹೊರಟ್ಟಿ
Last Updated : May 18, 2022, 2:12 PM IST