ಚಿಕ್ಕೋಡಿ: ಟಿಪ್ಪರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಹಿನ್ನೆಲೆ ಓರ್ವ ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯಗಳಾದ ಘಟನೆ ಅಥಣಿ ತಾಲೂಕಿನ ಹುಲಗಬಾಳ ಕ್ರಾಸ್ನಲ್ಲಿ ಸಂಭವಿಸಿದೆ.
ಟಿಪ್ಪರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಚಾಲಕ ಸಾವು, ಇಬ್ಬರ ಸ್ಥಿತಿ ಗಂಭೀರ - ಅಥಣಿ ಹುಲಗಬಾಳ ಕ್ರಾಸ್ ಟಿಪ್ಪರ್ ಮತ್ತು ಬೈಕ್ ಅಪಘಾತ
ಅಥಣಿ ತಾಲೂಕಿನ ಹುಲಗಬಾಳ ಕ್ರಾಸ್ ಬಳಿ ಬೈಕ್ ಮತ್ತು ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಟಿಪ್ಪರ್ ಚಾಲಕ ಸಾವನ್ನಪ್ಪಿದ್ದಾನೆ. ಬೈಕ್ ಸವಾರರು ತೀವ್ರವಾಗಿ ಗಾಯಗೊಂಡಿದ್ದಾರೆ.
![ಟಿಪ್ಪರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಚಾಲಕ ಸಾವು, ಇಬ್ಬರ ಸ್ಥಿತಿ ಗಂಭೀರ bike-and-tipper-accident-in-hulagabala-cross-athani](https://etvbharatimages.akamaized.net/etvbharat/prod-images/768-512-13259242-thumbnail-3x2-kkdddk.jpg)
ಟಿಪ್ಪರ್ ಮತ್ತು ಬೈಕ್ ಅಪಘಾತ
ಈ ದುರ್ಘಟನೆಯಲ್ಲಿ ಟಿಪ್ಪರ್ ಚಾಲಕ ಸ್ಥಳದಲ್ಲೇ ಸಾವನಪ್ಪಿದ್ದಾನೆ. ಗಾಯಾಳುಗಳನ್ನು ಅಥಣಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಿಪ್ಪರ್ ಪಲ್ಟಿಯಾಗಿ ಚಾಲಕ ಒಳಗೆ ಸಿಕ್ಕಿಹಾಕಿಕೊಂಡು ಮೃತಪಟ್ಟಿದ್ದಾನೆ. ಇತ್ತ ಬೈಕ್‍ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
TAGGED:
ಟಿಪ್ಪರ್ ಮತ್ತು ಬೈಕ್ ಅಪಘಾತ