ಬೆಳಗಾವಿ:ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಖಾನಾಪುರ ತಾಲೂಕಿನ ಕೌಂದಲ್ ಗ್ರಾಮದಲ್ಲಿ ನಡೆದಿದೆ.
ಲಾರಿ-ದ್ವಿಚಕ್ರ ವಾಹನ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು - ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ
ಬೆಳಗಾವಿಯಲ್ಲಿ ಲಾರಿ-ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಬೈಕ್ ಸವಾರ ಸ್ಥಳದಲ್ಲೇ ಸಾವು
ಖಾನಾಪುರ ತಾಲೂಕಿನ ಕಾರಲಗಾ ಗ್ರಾಮದ ಗಣೇಶ ಶಾಂತಾರಾಮ ಅಳವಣಿ (24) ಮೃತಪಟ್ಟವರು.
ಈತ ಖಾನಾಪುರದಿಂದ ಕಾರಲಗಾ ಗ್ರಾಮಕ್ಕೆ ಬೈಕ್ನಲ್ಲಿ ಸಂಚರಿಸುತ್ತಿದ್ದ ವೇಳೆ ಟ್ರಕ್, ಬೈಕಿಗೆ ಡಿಕ್ಕಿ ಹೊಡೆದಿದೆ.ಖಾನಾಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.