ಬೆಳಗಾವಿ: ಭೀಕರ ರಸ್ತೆ ಅಪಘಾತದಲ್ಲಿ ಅಕ್ಕ-ತಮ್ಮ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ತಾಲೂಕಿನ ದೇಸೂರು ಗ್ರಾಮದಲ್ಲಿ ನಡೆದಿದೆ.
ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ: ಅಕ್ಕ-ತಮ್ಮ ಸ್ಥಳದಲ್ಲೇ ಸಾವು - Renuka Tegura death of Desura village
ಓವರ್ ಟೇಕ್ ಮಾಡುವ ವೇಳೆ ಲಾರಿಗೆ ಬೈಕ್ ಡಿಕ್ಕಿಯಾಗಿದ್ದು, ಲಾರಿ ಚಕ್ರದಡಿ ಸಿಲುಕಿ ಅಕ್ಕ, ತಮ್ಮ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಳಗಾವಿ ತಾಲೂಕಿನ ದೇಸೂರು ಗ್ರಾಮದಲ್ಲಿ ನಡೆದಿದೆ.
ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ
ದೇಸೂರ ಗ್ರಾಮದ ರೇಣುಕಾ ತೇಗೂರ(25), ಕಲ್ಮೇಶ್ ಕೊಳವಿ(19) ಮೃತ ದುರ್ದೈವಿಗಳು. ದೇಸೂರ್‌ನಿಂದ ಕಮಲ್ ನಗರದತ್ತ ಬೈಕ್ ಮೇಲೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.
ಓವರ್ ಟೇಕ್ ಮಾಡುವ ವೇಳೆ ಲಾರಿಗೆ ಬೈಕ್ ಡಿಕ್ಕಿಯಾಗಿದ್ದು, ಲಾರಿ ಚಕ್ರದಡಿ ಸಿಲುಕಿ ಅಕ್ಕ, ತಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮಟ್ಟಿದೆ. ಸ್ಥಳಕ್ಕೆ ಬೆಳಗಾವಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated : Nov 13, 2020, 4:36 PM IST