ಬೆಳಗಾವಿ: ಮತದಾರರಲ್ಲಿ ಕಡ್ಡಾಯ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಬೆಳಗಾವಿ ಓಟ್ಸ್ ಹಂಡ್ರೆಡ್ ಪರ್ಸೆಂಟ್ ಅಸೋಸಿಯೇಷನ್ ವತಿಯಿಂದ ನಗರದಲ್ಲಿ ಬೈಕ್ ರ್ಯಾಲಿ ನಡೆಸಲಾಯಿತು.
ಬೆಳಗಾವಿಯಲ್ಲಿ ಮತದಾನ ಜಾಗೃತಿ ಮೂಡಿಸಲು ಬೈಕ್ ರ್ಯಾಲಿ - undefined
ಮತದಾನ ಕುರಿತು ಜಿಲ್ಲೆಯಲ್ಲಿ ವಿವಿಧ ರೀತಿಯ ಜಾಗೃತಿ ಕಾರ್ಯಕ್ರಮಗಳು ನಡೆಯುತ್ತಿವೆ. ಅಂತೆಯೇ ಬೆಳಗಾವಿ ಸ್ವೀಪ್ ಸಮಿತಿ ಅಧಿಕಾರಿಗಳು ಬೈಕ್ ರ್ಯಾಲಿ ಹಾಗೂ ಗಾಳಿಪಟ ಹಾರಿಸುವ ಮೂಲಕ ವಿಶಿಷ್ಟ ರೀತಿಯಲ್ಲಿ ಕಡ್ಡಾಯ ಮತದಾನಕ್ಕೆ ಜನರಲ್ಲಿ ಅರಿವು ಮೂಡಿಸಿದರು.
ಮತದಾನ ಜಾಗೃತಿ ಬೈಕ್ ರ್ಯಾಲಿ ಉದ್ಘಾಟಿಸಿ ಮಾತನಾಡಿದ ಬೆಳಗಾವಿ ಓಟ್ಸ್ ಹಂಡ್ರೆಡ್ ಪರ್ಸೆಂಟ್ ಅಸೋಸಿಯೇಷನ್ ಮುಖಂಡ ಡಿ.ಜಿ ನಾಗೇಶ್ ಮಾತನಾಡಿ, ಮತದಾರರಲ್ಲಿ ಮತದಾನದ ಬಗ್ಗೆ ಅರಿವು ಮೂಡಿಸುವುದು ಅವಶ್ಯಕತೆ ಇದೆ. ಪ್ರಜಾಪ್ರಭುತ್ವ ಸದೃಢಗೊಳಿಸಲು ಎಲ್ಲರೂ ತಪ್ಪದೆ ಮತದಾನ ಮಾಡಬೇಕು. ಈ ಕುರಿತು ಜಾಗೃತಿ ಮೂಡಿಸಲು ಅಸೋಸಿಯೇಷನ್ ವತಿಯಿಂದ ಹಲವಾರು ಕಡೆ ಗಾಳಿಪಟ ಉತ್ಸವ, ಬೈಕ ರ್ಯಾಲಿ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದೇವೆ ಎಂದರು.
ಮತದಾನ ಕುರಿತು ಜಿಲ್ಲೆಯಲ್ಲಿ ವಿವಿಧ ರೀತಿಯ ಜಾಗೃತಿ ಕಾರ್ಯಕ್ರಮಗಳು ಮೂಲಕ ವಿಶಿಷ್ಟ ರೀತಿಯಲ್ಲಿ ಕಡ್ಡಾಯ ಮತದಾನಕ್ಕೆ ಅರಿವು ಮೂಡಿಸಲಾಗುತ್ದತಿದೆ.