ಅಥಣಿ: ದ್ವಿಚಕ್ರ ವಾಹನಗಳನ್ನು ಕದಿಯುತ್ತಿದ್ದ ಶಿರಹಟ್ಟಿ ಹಾಲಿ ಯಲ್ಲಮ್ಮವಾಡಿ ನವ ಗ್ರಾಮದ ನಿವಾಸಿ ರಂಜಾನ್ ಹುಸೇನಸಾಬ ಐನಾಪೂರ (27) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಆರೋಪಿ ರಂಜಾನ್ ಹುಸೇನ್ ಬಂಧನ ತಾಲೂಕಿನಲ್ಲಿ ಈಚೆಗೆ ದ್ವಿಚಕ್ರ ವಾಹನ ಕಳ್ಳತನಗಳ ಪ್ರಕರಣಗಳು ಹೆಚ್ಚಾದ ಹಿನ್ನೆಲೆ ಬೆಳಗಾವಿ ಎಸ್ಪಿ ಲಕ್ಷ್ಮಣ್ ನಿಂಬರಗಿ ಹಾಗೂ ಅಥಣಿ ಡಿವೈಎಸ್ಪಿ ಎಸ್.ವಿ.ಗಿರೀಶ್ ಅವರ ನೇತೃತ್ವದಲ್ಲಿ ಅಥಣಿ ಪೊಲೀಸರು ತಂಡ ರಚಿಸಿದ್ದರು.
ಅಂದಾಜು 5 ಲಕ್ಷ ರೂಪಾಯಿ ಹಾಗೂ 15 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಬೆಳಗಾವಿ, ಬಾಗಲಕೋಟೆ, ಮತ್ತು ಮಹಾರಾಷ್ಟ್ರ ರಾಜ್ಯದ ವಿವಿಧ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿವೆ.
ಪ್ರಕರಣದ ಜಾಡು ಪತ್ತೆ ಹಚ್ಚಿರುವ ಪಿಎಸ್ಐ ಎಂ.ಡಿ.ಘೋರಿ ಹಾಗೂ ಅಥಣಿ ಪಿಎಸ್ಐ ಕುಮಾರ್ ಹಾಡಕಾರ ಮತ್ತು ತನಿಖಾ ತಂಡದ ಕಾರ್ಯವನ್ನು ಶ್ಲಾಘಿಸಿ, ಆರಕ್ಷಕ ಅಧೀಕ್ಷಕರು ನಗದು ಬಹುಮಾನ ಮತ್ತು ಪ್ರಶಂಸನಾ ಪತ್ರ ನೀಡಿದ್ದಾರೆ.