ಕರ್ನಾಟಕ

karnataka

ETV Bharat / state

ಅಥಣಿ ತಾಲೂಕಾಡಳಿತದಿಂದ ದೇವರಾಜ ಅರಸು ಜನ್ಮ ದಿನಾಚರಣೆ - Birthday of Devaraja arasu in Athani

ಅಥಣಿಯಲ್ಲಿ ಮಾಜಿ ಸಿಎಂ ದಿವಂಗತ ದೇವರಾಜ ಅರಸು ಜನ್ಮದಿನಾಚರಣೆಯನ್ನು ತಾಲೂಕು ಆಡಳಿತ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಸರಳವಾಗಿ ಆಚರಿಸಲಾಯಿತು.

asa
ಅಥಣಿ ತಾಲೂಕಾಡಳಿತದಿಂದ ದೇವರಾಜ ಅರಸು ಜನ್ಮ ದಿನಾಚರಣೆ

By

Published : Aug 21, 2020, 11:21 AM IST

ಅಥಣಿ: ತಾಲೂಕು ಪಂಚಾಯತ್​ ಸಭಾಭವನದಲ್ಲಿ ದಿವಂಗತ ದೇವರಾಜ ಅರಸು ಅವರ ಜನ್ಮ ದಿನಾಚರಣೆಯನ್ನು ತಾಲೂಕು ಆಡಳಿತ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಸರಳವಾಗಿ ಆಚರಿಸಲಾಯಿತು.

ಅಥಣಿ ತಾಲೂಕಾಡಳಿತದಿಂದ ದೇವರಾಜ ಅರಸು ಜನ್ಮ ದಿನಾಚರಣೆ

ಈ ವೇಳೆ ಮಾತನಾಡಿದ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರವಿ ಬಂಗಾರಪ್ಪನವರ, ದೀನ ದಲಿತರ ಏಳಿಗೆಗಾಗಿ ಶ್ರಮಿಸಿದ ದೇವರಾಜ ಅರಸು 1977ರಲ್ಲಿ ಹಿಂದುಳಿದ ವರ್ಗಗಳ ಇಲಾಖೆ ಸ್ಥಾಪಿಸಿದ್ದರು. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಸತಿ ನಿಲಯಗಳ ಸ್ಥಾಪನೆ ಮಾಡುವ ಮೂಲಕ ಲಕ್ಷಾಂತರ ವಿದ್ಯಾರ್ಥಿಗಳ ಓದಿಗೆ ದಾರಿ ದೀಪವಾದರು ಎಂದರು.

ತಾಲೂಕು ದಂಡಾಧಿಕಾರಿ ದುಂಡಪ್ಪಾ ಕೋಮಾರ ಮಾತನಾಡಿ, ಮೀಸಲಾತಿ ಆಧಾರದ ಮೇಲೆ ರಾಜ್ಯದಲ್ಲಿ ದೇವರಾಜ ಅರಸು ಅಧಿಕಾರ ಅವಧಿಯಲ್ಲಿ ಎಲ್ಲರಿಗೂ ಸಮಾನ ಅಧಿಕಾರ ಸಿಗುವಂತೆ ಮಾಡಿದ್ದರು. ಒಬಿಸಿ ಕೆಟಗರಿಗೆ ಅವಕಾಶ ಕಲ್ಪಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಕಾನೂನಾತ್ಮಕವಾಗಿ ಹಿಂದುಳಿದ ವರ್ಗಗಳಿಗೂ ಮೀಸಲಾತಿ ಕಲ್ಪಿಸಿದ್ದರಿಂದ ಸಮಾಜಕ್ಕೆ ಅವರ ಕೊಡುಗೆ ಅಪಾರವಾಗಿದೆ ಎಂದರು.

ABOUT THE AUTHOR

...view details