ಬೆಳಗಾವಿ: ಮಾ.30ರಂದು ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ನಾಮಪತ್ರ ಸಲ್ಲಿಸುತ್ತಿದ್ದಾರೆ. ಈ ವೇಳೆ ಸಿಎಂ ಬಿಎಸ್ವೈ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿ ಗಣ್ಯರು ಭಾಗಿಯಾಗಲಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಹೇಳಿದ್ದಾರೆ.
ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಪೂರ್ವಭಾವಿ ಸಭೆಯ ಬಳಿಕ ಮಾತನಾಡಿದ ಅವರು, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಸಚಿವ ಜಗದೀಶ್ ಶೆಟ್ಟರ್, ಉಮೇಶ ಕತ್ತಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ಪಕ್ಷದ ಗೆಲುವಿಗೆ ಬೇಕಾದ ಅಗತ್ಯ ರೂಪರೇಷೆಗಳ ಬಗ್ಗೆ ಚರ್ಚೆ ನಡೆಸಲಾಗಿದೆ.