ಕರ್ನಾಟಕ

karnataka

ETV Bharat / state

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಬಹಿರಂಗ ಹೇಳಿಕೆ ನೀಡಬೇಡಿ: ಬಿಜೆಪಿ ನಾಯಕರಿಗೆ ಹೈಕಮಾಂಡ್ ಸೂಚನೆ - bjp latest news

bjp-core-committee-meeting-begins
ಬಿಜೆಪಿಯ ಮಹತ್ವದ ಕೋರ್ ಕಮಿಟಿ ಸಭೆ ಆರಂಭ : ಸದಾನಂದಗೌಡ ಸೇರಿ ಮೂವರು ಗೈರು

By

Published : Dec 4, 2020, 9:06 PM IST

Updated : Dec 4, 2020, 11:00 PM IST

21:04 December 04

ಸದಾನಂದಗೌಡ ಸೇರಿ ಮೂವರು ಗೈರು

ಬೆಳಗಾವಿ: ತೀವ್ರ ಕುತೂಹಲ ಮೂಡಿಸಿದ್ದ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಮುಕ್ತಾಯವಾಗಿದ್ದು, ಸಚಿವ ಸಂಪುಟ ವಿಸ್ತರಣೆ ಸೇರಿ ಹಲವು ವಿಷಯಗಳ ಕುರಿತು ಚರ್ಚೆ ನಡೆದಿದೆ. ಸಂಪುಟ ವಿಸ್ತರಣೆ ಬಗ್ಗೆ ಯಾರೂ ಬಹಿರಂಗ ಹೇಳಿಕೆ ನೀಡಬಾರದು ಎಂದು ನಾಯಕರಿಗೆ ಹೈಕಮಾಂಡ್ ಸಭೆಯಲ್ಲಿ ಸೂಚಿಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. 

ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ನೇತೃತ್ವದಲ್ಲಿ ಸಭೆ ನಡೆದಿದ್ದು, ಸಿಎಂ ಬಿಎಸ್‌ವೈ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಡಿಸಿಎಂ ಗೋವಿಂದ ಕಾರಜೋಳ, ಸಚಿವರಾದ ಕೆ.ಎಸ್.ಈಶ್ವರಪ್ಪ, ಜಗದೀಶ್ ಶೆಟ್ಟರ್, ಆರ್.ಅಶೋಕ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅರುಣಕುಮಾರ್, ಅರವಿಂದ ಲಿಂಬಾವಳಿ ಭಾಗಿಯಾಗದ್ದರು. ಕೇಂದ್ರ ಸಚಿವ ಸದಾನಂದ ಗೌಡ, ಮಾಜಿ ಸಚಿವ ಸಿ.ಎಂ. ಉದಾಸಿ, ರಾಷ್ಟ್ರೀಯ ಸಹ ಉಸ್ತುವಾರಿ ಡಿಕೆ ಅರುಣಾ ಗೈರಾಗಿದ್ದಾರೆ.  

ಮೂರು ಕ್ಷೇತ್ರಗಳ ಉಪಚುನಾವಣೆಯ ಅಭ್ಯರ್ಥಿಗಳ ಆಯ್ಕೆ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆದಿದೆ ಎಂದು ತಿಳಿದುಬಂದಿದೆ.

Last Updated : Dec 4, 2020, 11:00 PM IST

ABOUT THE AUTHOR

...view details