ಕರ್ನಾಟಕ

karnataka

ETV Bharat / state

ಬೆಳಗಾವಿಯಲ್ಲಿ ನಡೆಯುತ್ತಿರುವ ಬಿಜೆಪಿ ಕಾರ್ಯಕಾರಣಿ ಸಭೆಗೆ ಅರುಣ್ ಸಿಂಗ್ ಚಾಲನೆ - ಬೆಳಗಾವಿಯಲ್ಲಿ ನಡೆಯುತ್ತಿರು ಬಿಜೆಪಿ ಕಾರ್ಯಕಾರಣಿ ಸಭೆಗೆ ಚಾಲನೆ

ರಾಜ್ಯದ ವಿವಿಧ ಕಡೆಯಿಂದ ಬಿಜೆಪಿ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಉಪ ಚುನಾವಣೆ ಸಿದ್ಧತೆ ಹಾಗೂ ಗ್ರಾಪಂ ಚುನಾವಣೆ ಬಗ್ಗೆ ಸಭೆಯಲ್ಲಿ ಗಂಭೀರ ಚರ್ಚೆ ನಡೆಸಲಾಗುತ್ತಿದೆ..

BJP Core Committee Meeting in belgavi
ಬಿಜೆಪಿ ಕಾರ್ಯಕಾರಣಿ ಸಭೆಗೆ ಚಾಲನೆ

By

Published : Dec 5, 2020, 12:54 PM IST

ಬೆಳಗಾವಿ :ನಗರದಲ್ಲಿ ನಡೆಯುತ್ತಿರುವ ಬಿಜೆಪಿ ರಾಜ್ಯ ಕಾರ್ಯಕಾರಣಿ ಸಭೆಗೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಚಾಲನೆ ನೀಡಿದರು‌.

ಬಿಜೆಪಿ ಕಾರ್ಯಕಾರಣಿ ಸಭೆಗೆ ಚಾಲನೆ

ಇಲ್ಲಿನ ಗಾಂಧಿ ಭವನದಲ್ಲಿ ಸಭೆ ನಡೆಯುತ್ತಿದ್ದು, ದೀಪ ಬೆಳಗಿಸುವ ಮೂಲಕ ಕಾರ್ಯಕಾರಣಿ ಸಭೆಗೆ ಚಾಲನೆ ನೀಡಲಾಯಿತು. ಬಳಿಕ ಸಂಘ ಸಂಸ್ಥಾಪಕರಿಗೆ ಪುಷ್ಪನಮನ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಸಚಿವ ಜಗದೀಶ ಶೆಟ್ಟರ್, ಆರ್. ಅಶೋಕ್, ಕೆ ಎಸ್ ಈಶ್ವರಪ್ಪ, ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಮತ್ತಿತರರು ವೇದಿಕೆ ಮೇಲೆ ಉಪಸ್ಥಿತರಿದ್ದರು‌.

ಓದಿ:ಬೆಳಗಾವಿಯಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಣಿ ಸಭೆ : ಸಿಎಂ ಸಂಚರಿಸುವ ಮಾರ್ಗಕ್ಕೆ ಸ್ಯಾನಿಟೈಸೇಷನ್

ರಾಜ್ಯದ ವಿವಿಧ ಕಡೆಯಿಂದ ಬಿಜೆಪಿ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಉಪ ಚುನಾವಣೆ ಸಿದ್ಧತೆ ಹಾಗೂ ಗ್ರಾಪಂ ಚುನಾವಣೆ ಬಗ್ಗೆ ಸಭೆಯಲ್ಲಿ ಗಂಭೀರ ಚರ್ಚೆ ನಡೆಸಲಾಗುತ್ತಿದೆ. ಬಿಜೆಪಿ ‌ಜಿಲ್ಲಾ ಉಸ್ತುವಾರಿಗಳಿಗೆ ಗ್ರಾಪಂ ಉಸ್ತುವಾರಿ ನೀಡುವ ಜತೆಗೆ ಚುನಾವಣೆ ತಂತ್ರಗಳ ಬಗ್ಗೆ ಮಾಹಿತಿ ನೀಡಲಾಯಿತು.

For All Latest Updates

ABOUT THE AUTHOR

...view details