ಕರ್ನಾಟಕ

karnataka

ETV Bharat / state

ಬೆಳಗಾವಿಯಲ್ಲಿ ಬಿಜೆಪಿ ಕೋರ್​​​​​​ ಕಮಿಟಿ ಸಭೆ - ಕೋರ್​​ ಕಮಿಟಿ ಸಭೆ ಆರಂಭ

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಕೇಂದ್ರ ಸಚಿವ ಸುರೇಶ್​ ಅಂಗಡಿ ಅವರ ಕಚೇರಿಯಲ್ಲಿ ಬಿಜೆಪಿ ಕೋರ್​ ಕಮಿಟಿ ಸಭೆ ನಡೆಯಿತು.

ಬಿಜೆಪಿ ಕೋರ್​ ಕಮಿಟಿ ಸಭೆ

By

Published : Oct 2, 2019, 11:02 PM IST

ಬೆಳಗಾವಿ: ಲೋಕಸಭಾ ಕ್ಷೇತ್ರದ ಬಿಜೆಪಿ ಕೋರ್ ಕಮಿಟಿ ಸಭೆ ಕೇಂದ್ರ ಸಚಿವ ಸುರೇಶ್​ ಅಂಗಡಿ ಅವರ ಕಚೇರಿಯಲ್ಲಿ ಸಭೆ ನಡೆಯಿತು.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಸಭೆ ನಡೆಯಿತು. ಜಿಲ್ಲೆಯ ಶಾಸಕರಾದ ಅಭಯ ಪಾಟೀಲ್, ಮಹಾದೇವಪ್ಪ ಯಾದವಾಡ, ಮಹಾಂತೇಶ ದೊಡ್ಡಗೌಡರ, ಎಂಎಲ್​ಸಿ ಮಹಾಂತೇಶ ಕವಟಗಿಮಠ, ಪ್ರಮುಖ ಬಿಜೆಪಿ ಮುಖಂಡರು ಭಾಗಿ ಆಗಿದ್ರು.

ಬಿಜೆಪಿ ಕೋರ್​ ಕಮಿಟಿ ಸಭೆ

ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಶಾಸಕ ಆನಂದ ಮಾಮನಿ, ಗೋಕಾಕ ಬಿಜೆಪಿ ಪರಾಜಿತ ಅಭ್ಯರ್ಥಿ ಅಶೋಕ ಪೂಜಾರಿ ಗೈರಾಗಿದ್ರು. ಗೋಕಾಕ್, ಕಾಗವಾಡ ಹಾಗೂ ಅಥಣಿ ಕ್ಷೇತ್ರದ ಉಪ ಚುನಾವಣೆ ಕುರಿತು ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ನಡೆದಿರುವ ಸಾಧ್ಯತೆ ಇದೆ.

ಕೋರ್​​ ಕಮಿಟಿ ಸಭೆಯ ಆರಂಭದಲ್ಲಿ ಕೇಂದ್ರ ರೈಲ್ವೆ ಇಲಾಖೆ ರಾಜ್ಯ ಸಚಿವ ಸುರೇಶ್​​ ಅಂಗಡಿ ಅವರಿಗೆ ಕಲಾಕಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ ಕುಮಾರ್ ಕಟೀಲ್ ಕಾಲೆಳೆದ್ರು.

ABOUT THE AUTHOR

...view details