ಬೆಳಗಾವಿ:ಎರಡೂವರೆ ದಶಕಗಳ ಬಳಿಕ ಪಕ್ಷದ ಚಿಹ್ನೆ ಮೇಲೆ ಚುನಾವಣೆ ಎದುರಿಸಲು ಬಿಜೆಪಿ ನಿರ್ಧರಿಸಿದೆ. ಇಷ್ಟು ದಿನ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಭಾಷಾಧಾರಿತವಾಗಿ ನಡೆಯುತ್ತಿತ್ತು. ಆದರೆ ಸೆ. 03ರಂದು ನಡೆಯುವ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯನ್ನು ಪಕ್ಷದ ಚಿಹ್ನೆ ಮೇಲೆ ನಡೆಸಲು ಬಿಜೆಪಿ ತೀರ್ಮಾನಿಸಿದೆ.
ಬೆಳಗಾವಿಯ ಖಾಸಗಿ ಹೋಟೆಲ್ನಲ್ಲಿ ನಡೆದ ಬಿಜೆಪಿ ಪದಾಧಿಕಾರಿಗಳ ಸಭೆ ಪಾಲಿಕೆ ಚುನಾವಣೆ ಘೋಷಣೆ ಹಿನ್ನೆಲೆಯಲ್ಲಿ ಬೆಳಗಾವಿಯ ಖಾಸಗಿ ಹೋಟೆಲ್ನಲ್ಲಿ ನಡೆದ ಬಿಜೆಪಿ ಪದಾಧಿಕಾರಿಗಳ ಸಭೆ ನಡೆಸಿತು. ಈ ವೇಳೆ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್, ತೆಂಗಿನಕಾಯಿ ಪಕ್ಷದ ಚಿಹ್ನೆ ಮೇಲೆ ಚುನಾವಣೆ ನಡೆಸುವ ನಿರ್ಧಾರ ಪ್ರಕಟಿಸಿದರು.
ಬಳಿಕ ಮಾತನಾಡಿದ ಮಹೇಶ್, ತೆಂಗಿನಕಾಯಿ ಪಕ್ಷದ ಚಿಹ್ನೆಯ ಮೇಲೆ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಸ್ಪರ್ಧಿಸುವ ನಿರ್ಧಾರವನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ತೆಗೆದುಕೊಂಡಿದ್ದೇವೆ. ಎಂಎಲ್‌ಎ, ಎಂಪಿ ಚುನಾವಣೆ ರೀತಿ ಪಾಲಿಕೆ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಈ ಚುನಾವಣೆಯಲ್ಲಿ ಕಾರ್ಯಕರ್ತರನ್ನು ಗೆಲ್ಲಿಸುವ ಪಣ ಬಿಜೆಪಿ ಮಾಡಿದೆ. ಇತ್ತೀಚೆಗೆ ನಡೆದ ಲೋಕಸಭಾ ಉಪಚುನಾವಣೆಗೆ ಸಿದ್ಧತಾ ಕಾರ್ಯ ಮಾಡಿಕೊಳ್ಳಲಾಗಿತ್ತು. ಅದೇ ರೀತಿ ಸಿದ್ಧತಾ ಕಾರ್ಯ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಮಾಡುತ್ತೇವೆ ಎಂದರು.
ಓದಿ: ಇಂದಿನಿಂದ 17ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಾಧ್ಯತೆ
ಮಹಾನಗರ ಪಾಲಿಕೆ ಮೇಲೆ ಬಿಜೆಪಿ ಧ್ವಜ ಹಾರಿಸುತ್ತೇವೆ. ಪಕ್ಷಕ್ಕಾಗಿ ದುಡಿದವರಿಗೆ ಟಿಕೆಟ್ ನೀಡುತ್ತೇವೆಯೇ ಹೊರತು ನನ್ನ ಹಿಂದೆ ಸುತ್ತುವವರಿಗೆ, ಶಾಸಕ ಅನಿಲ್ ಬೆನಕೆ ಹಿಂದೆ ಸುತ್ತು ವವರಿಗೆ ಟಿಕೆಟ್ ನೀಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟ ಸಂದೇಶ ರವಾನಿಸಿದರು.