ಚಿಕ್ಕೋಡಿ :ಚಿಕ್ಕೋಡಿ-ಸದಲಗಾ ಕ್ಷೇತ್ರದ 25 ಗ್ರಾಪಂಗಳ ಪೈಕಿ 13 ಬಿಜೆಪಿ ಪರವಾಗಿವೆ ಎಂದು ವಿಧಾನಪರಿಷತ್ನ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, "ರಾಜ್ಯದಲ್ಲಿ ನಡೆದ ಗ್ರಾಪಂ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಹೆಚ್ಚಿನ ಪ್ರಮಾಣದಲ್ಲಿ ಜಯಗಳಿಸಿದ್ದಾರೆ. ಈ ನಿಟ್ಟಿನಲ್ಲಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಹೆಚ್ಚಿನ ಪ್ರಮಾಣದಲ್ಲಿ ಗೆಲುವನ್ನು ಸಾಧಿಸಿದ್ದಾರೆ" ಎಂದು ಹೇಳಿದರು.