ಕರ್ನಾಟಕ

karnataka

ETV Bharat / state

ಬಿಜೆಪಿಯವರು ಕುತಂತ್ರ ರಾಜಕಾರಣ ಮಾಡುತ್ತಿದ್ದಾರೆ: ಚನ್ನರಾಜ ಹಟ್ಟಿಹೊಳಿ ಆರೋಪ - Belagavi latest news

ಬೆಳಗಾವಿ ಕ್ಷೇತ್ರದ ರೋಡ್ ಪಾಲಿಟಿಕ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕಿ ​​ಲಕ್ಷ್ಮಿ ಹೆಬ್ಬಾಳ್ಕರ್‌ ಸಹೋದರ ಚನ್ನರಾಜ ಹಟ್ಟಿಹೊಳಿ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Channaraja hattiholi
ಚನ್ನರಾಜ ಹಟ್ಟಿಹೊಳಿ

By

Published : Sep 30, 2021, 12:15 PM IST

ಬೆಳಗಾವಿ: ಗ್ರಾಮೀಣ ವಿಧಾನಸಭಾ ಕ್ಷೇತ್ರದ ರೋಡ್ ಪಾಲಿಟಿಕ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ - ಬಿಜೆಪಿ ಮಧ್ಯೆ ವಾಕ್ಸಮರ ಮುಂದುವರೆಯುತ್ತಿದೆ. ಈ ಬೆನ್ನಲ್ಲೇ ಇದೀಗ ಬಿಜೆಪಿ ವಿರುದ್ಧ ಶಾಸಕಿ ​​ಲಕ್ಷ್ಮಿ ಹೆಬ್ಬಾಳ್ಕರ್‌ ಸಹೋದರ ಚನ್ನರಾಜ ಹಟ್ಟಿಹೊಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಅವರು ಅವಹೇಳನಕಾರಿ ಬ್ಯಾನರ್ ಅಂಟಿಸಿರುವುದನ್ನು ನಾನು ಖಂಡಿಸುತ್ತೇ‌ನೆ. ಈ ಸಂಬಂಧ ಈಗಾಗಲೇ ದೂರು ದಾಖಲಿಸಿದ್ದೇವೆ. ರಾಜ್ಯದ ಅತ್ಯಂತ ಕ್ರಿಯಾಶೀಲ ರಾಜಕಾರಣಿಗಳಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್‌ ಕೂಡ ಒಬ್ಬರು. ಅವರು ಸಾರ್ವಜನಿಕ ಕೆಲಸಗಳನ್ನು ಅತ್ಯಂತ ಮುತುವರ್ಜಿಯಿಂದ ಮಾಡುತ್ತಿದ್ದಾರೆ. 25 ವರ್ಷಗಳಲ್ಲಿ ಆಗದ ಕೆಲಸಗಳನ್ನು ಕೇವಲ ಮೂರು ವರ್ಷಗಳಲ್ಲಿ ಮಾಡಿ ತೋರಿಸಿದ್ದಾರೆ ಎಂದರು.

ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಶಾಸಕಿ ​​ಲಕ್ಷ್ಮಿ ಹೆಬ್ಬಾಳ್ಕರ್‌ ಸಹೋದರ ಚನ್ನರಾಜ ಹಟ್ಟಿಹೊಳಿ

ಇನ್ನು ಬಿಜೆಪಿಯವರು ಸುಳ್ಳು ಆರೋಪ ಮಾಡುವುದನ್ನು ಬಿಟ್ಟು ನೇರ ರಾಜಕಾರಣಕ್ಕೆ ಬರಬೇಕು. ಮಾರ್ಕಂಡೇಯ ನದಿ ಗ್ರಾಮೀಣ ಕ್ಷೇತ್ರದ 50 ಹಳ್ಳಿಗಳಲ್ಲಿ ಹರಿಯುತ್ತದೆ. ಹೀಗಾಗಿ, ಪ್ರವಾಹ ಬಂದಾಗ ಡಾಂಬರ್ ರಸ್ತೆಗಳು ಡ್ಯಾಮೇಜ್ ಆಗುತ್ತವೆ. ಮಳೆ ನಿಂತ ಮೇಲೆ ಡಾಂಬರ್ ರಸ್ತೆಗಳನ್ನು ಸುಧಾರಣೆ ಮಾಡಬೇಕಾಗುತ್ತದೆ. ಲಕ್ಷ್ಮಿ ಹೆಬ್ಬಾಳ್ಕರ್‌ ಅಭಿವೃದ್ಧಿ ಕೆಲಸಗಳನ್ನು ಸಹಿಸಿಕೊಳ್ಳಲಾಗದೇ ಬಿಜೆಪಿಯವರು ಕುತಂತ್ರ ರಾಜಕಾರಣ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ABOUT THE AUTHOR

...view details