ಬೆಳಗಾವಿ: ಮಾಜಿ ಸಚಿವ ಡಿ.ಕೆ. ಶಿವಕುಮಾರ ಭೇಟಿ ಸೌಹಾರ್ದಯುತವೇ ಹೊರತು ರಾಜಕೀಯ ಭೇಟಿ ಅಲ್ಲ ಎಂದು ಗೋಕಾಕ್ನ ಬಿಜೆಪಿ ಮುಖಂಡ ಅಶೋಕ ಪೂಜಾರಿ ಸ್ಪಷ್ಟಪಡಿಸಿದ್ದಾರೆ.
ಡಿ.ಕೆ ಶಿವಕುಮಾರ್ ಭೇಟಿ ರಾಜಕೀಯ ಉದ್ದೇಶಕ್ಕಲ್ಲ: ಬಿಜೆಪಿ ಮುಖಂಡ ಅಶೋಕ ಪೂಜಾರಿ - DKS bjp leader ashok pujari meet,
ಇತ್ತೀಚೆಗೆ ಕಾಂಗ್ರೆಸ್ ಮುಖಂಡ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿರುವುದಕ್ಕೆ ಗೋಕಾಕ್ನ ಬಿಜೆಪಿ ಮುಖಂಡ ಅಶೋಕ ಪೂಜಾರಿ ಸ್ಪಷ್ಟನೆ ನೀಡಿದ್ದಾರೆ.
ಬೆಳಗಾವಿಯ ಪ್ರವಾಸಿಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈಯಕ್ತಿಕವಾಗಿ ಎಲ್ಲ ಪಕ್ಷಗಳ ಮುಖಂಡರ ಜತೆಗೆ ನಾನು ಉತ್ತಮ ಸಂಬಂಧ ಹೊಂದಿದ್ದೇನೆ. ಗೋಕಾಕ್ ಕ್ಷೇತ್ರದಲ್ಲೂ ಎಲ್ಲ ಪಕ್ಷದ ನಾಯಕರ ಜತೆಗೆ ಉತ್ತಮ ಬಾಂಧವ್ಯ ಹೊಂದಿದ್ದೇನೆ. ಹೀಗಾಗಿ ಬೇರೆ ಪಕ್ಷದ ನಾಯಕರೊಂದಿನ ಸೌಹಾರ್ದಯುತ ಭೇಟಿಯನ್ನು ಅನ್ಯತಾ ಭಾವಿಸಬಾರದು. ರಾಜಕೀಯವಾಗಿ ನಾನು ಬಿಜೆಪಿಯಲ್ಲಿದ್ದೇನೆ. ಬಿಜೆಪಿ ಪಕ್ಷದ ಪರವಾಗಿ ಕೆಲಸ ಮಾಡುತ್ತೇನೆ. ಡಿಕೆಶಿ ಭೇಟಿ ಮಾಡಿರುವುದಕ್ಕೆ ನಮ್ಮ ಪಕ್ಷದಿಂದ ಯಾವುದೇ ನೋಟಿಸ್ ಬಂದಿಲ್ಲ ಎಂದು ಸ್ಪಷ್ಟಪಡಿಸಿದರು.
ಕಳೆದ ಮೂರು ದಶಕಗಳಿಂದ ಗೋಕಾಕ್ ಕ್ಷೇತ್ರದ ಸರ್ವಾಧಿಕಾರಿ ಮನೋಭಾವದ ವಿರುದ್ಧ ನಿರಂತರವಾಗಿ ಹೋರಾಟ ಇರುತ್ತದೆ. ಗೋಕಾಕ್ ಕ್ಷೇತ್ರದಲ್ಲಿ ರಮೇಶ ಜಾರಕಿಹೊಳಿ ಅವರು ಸರ್ವಾಧಿಕಾರಿ ವ್ಯವಸ್ಥೆ ನಿರ್ಮಿಸಿದ್ದಾರೆ. ಇದರ ವಿರುದ್ಧ ಮೊದಲಿನಿಂದಲೂ ಹೋರಾಡುತ್ತಿದ್ದೇನೆ ಎಂದರು.