ಬೆಳಗಾವಿ:ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಸಂಬಂಧಿಸಿದಂತೆಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧದ ಆರೋಪಗಳ ಬಗೆಗಿನ ಬೆಳವಣಿಗೆಗಳ ಸಂಪೂರ್ಣ ಮಾಹಿತಿ ಪಡೆದು ಮಾತನಾಡುತ್ತೇನೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು.
ನಗರದ ಸಂಕಮ್ ಹೋಟೆಲ್ನಲ್ಲಿ ಬಾಗಲಕೋಟೆ, ವಿಜಯಪುರ ಹಾಗೂ ಬೆಳಗಾವಿ ಜಿಲ್ಲೆಯ ಪ್ರಮುಖರೊಂದಿಗೆ ಬಿ.ಎಸ್. ಯಡಿಯೂರಪ್ಪ ಹಾಗೂ ಅರುಣ್ ಸಿಂಗ್ ನೇತೃತ್ವದಲ್ಲಿ ಸಭೆ ನಡೆಯುತ್ತಿತ್ತು. ಆದರೆ, ಈ ವೇಳೆ ಅರ್ಧಕ್ಕೆ ಸಭೆಯಿಂದ ಹೊರಬಂದು ಅರುಣ್ ಸಿಂಗ್ ತರಾತುರಿಯಲ್ಲಿ ರೂಮ್ಗೆ ದಾವಿಸಿದರು.