ಬೆಳಗಾವಿ:ರಾಜ್ಯ ಸರ್ಕಾರ ಮರಾಠಾ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಿದ್ದಕ್ಕೆ ಮರಾಠಿ ಭಾಷೆಯಲ್ಲಿ ಅಭಿನಂದನೆ ಸಲ್ಲಿಸಿದ್ದ ಮರಾಠಿ ಭಾಷೆಯ ಫ್ಲೆಕ್ಸ್‌ಗಳಿಗೆ ಕರವೇ ಕಾರ್ಯಕರ್ತರು ಕಪ್ಪು ಮಸಿ ಬಳಿದಿರುವ ಘಟನೆ ನಗರದ ಅನಗೋಳ ಕ್ರಾಸ್‌ನಲ್ಲಿ ನಡೆದಿದೆ.
ಮರಾಠಿ ಭಾಷೆಯ ಅಭಿನಂದನಾ ಫ್ಲೆಕ್ಸ್‌ಗಳಿಗೆ ಕಪ್ಪು ಮಸಿ ಬಳಿದ ಕರವೇ ಕಾರ್ಯಕರ್ತರು! - karaway activists black ink spread over flex at Belgavi
ಫ್ಲೆಕ್ಸ್ನಲ್ಲಿದ್ದ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಶಾಸಕ ಅಭಯ ಪಾಟೀಲ ಭಾವಚಿತ್ರಗಳಿಗೆ ಕಪ್ಪು ಮಸಿ ಬಳಿಯಲಾಗಿದೆ..

ಮರಾಠಿ ಭಾಷೆಯಲ್ಲಿ ಅಭಿನಂದನೆ ಸಲ್ಲಿಸಿದ ಫ್ಲೆಕ್ಸ್‌ಗೆ ಕಪ್ಪು ಮಸಿ ಬಳಿದ ಕರವೇ ಕಾರ್ಯಕರ್ತರು
ಮರಾಠಿ ಭಾಷೆಯಲ್ಲಿ ಅಭಿನಂದನೆ ಸಲ್ಲಿಸಿದ ಫ್ಲೆಕ್ಸ್‌ಗೆ ಕಪ್ಪು ಮಸಿ ಬಳಿದ ಕರವೇ ಕಾರ್ಯಕರ್ತರು
ಬೆಳಗಾವಿ ದಕ್ಷಿಣ ಬಿಜೆಪಿ ಶಾಸಕ ಅಭಯ್ ಪಾಟೀಲ್ ಬೆಂಬಲಿಗರು ಅಳವಡಿಸಿದ್ದ ಮರಾಠಿ ಫ್ಲೆಕ್ಸ್‌ಗೆ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ಕಾರ್ಯಕರ್ತರು ಕಪ್ಪು ಮಸಿ ಬಳಿದಿದ್ದಾರೆ.
ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಫ್ಲೆಕ್ಸ್ನಲ್ಲಿದ್ದ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಶಾಸಕ ಅಭಯ ಪಾಟೀಲ ಭಾವಚಿತ್ರಗಳಿಗೆ ಕಪ್ಪು ಮಸಿ ಬಳಿಯಲಾಗಿದೆ.