ಅಥಣಿ:ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಐತಿಹಾಸಿಕ ಗೆಲುವು ಸಿಗಬೇಕು. ಕಾರ್ಯಕರ್ತರು ಒಗ್ಗಟ್ಟಾಗಿ ದುಡಿಯೋಣ, ಬಿಜೆಪಿ ಪಕ್ಷವನ್ನ ಮಹಾರಾಷ್ಟ್ರದಲ್ಲಿ ಮತ್ತೆ ಅಧಿಕಾರಕ್ಕೆ ತರೋಣ ಎಂದು ಮುಖ್ಯಂತ್ರಿ ಬಿ ಎಸ್ ಯಡಿಯೂರಪ್ಪ ಸಾಂಗ್ಲಿ ಜಿಲ್ಲೆಯ ಜತ್ತ ವಿಧಾನಸಭಾ ಕ್ಷೇತ್ರದಲ್ಲಿ ಹೇಳಿದ್ದಾರೆ.
ಲಕ್ಷ್ಮಣ ಸವದಿ, ಉಪ ಮುಖ್ಯಮಂತ್ರಿ ಮಹಾರಾಷ್ಟ್ರದ ಜತ್ತ ವಿಧಾನಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ವಿಲಾಸರಾವ ಜಗತಾಪ ಪರ ಪ್ರಚಾರ ನಡೆಸಿದ ಸಿಎಂ, ದೇಶದ ತುಂಬೆಲ್ಲ ಬಿಜೆಪಿ ಪಕ್ಷದ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಿ ಬಿಜೆಪಿ ರಾಷ್ಟ್ರದಲ್ಲಿ ಅತಿ ದೊಡ್ಡ ಗೆಲುವು ಸಾಧಿಸಿದೆ. ಅದರಲ್ಲೂ ಕರ್ನಾಟಕದ ಪಾತ್ರ ಅತಿಮುಖ್ಯ. ಹಾಗೆ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲೂ ಬಿಜೆಪಿಗೆ ಗೆಲುವು ದೊರಕಿಸಿಕೊಡುವ ಮೂಲಕ ಮತ್ತೆ ಅಧಿಕಾರಕ್ಕೆ ತರೋಣ ಎಂದು ಹೇಳಿದರು.
ಸಭೆಯನ್ನ ಉದ್ದೇಶಿಸಿ ಮಾತನಾಡಿದ ಡಿಸಿಎಂ ಲಕ್ಷ್ಮಣ ಸವದಿ, ರಾಜ್ಯದಲ್ಲಿ ಬಿಜೆಪಿ, ರಾಷ್ಟ್ರದಲ್ಲೂ ಬಿಜೆಪಿ ಪಕ್ಷ ಇದ್ದರೆ ಆಡಳಿತ ಸರಿಯಾಗಿ ನಡೆಯುತ್ತೆ. ಅಕ್ಕಪಕ್ಕದ ರಾಜ್ಯಗಳಲ್ಲಿ ಬೇರೆ ಬೇರೆ ಪಕ್ಷ ಅಧಿಕಾರಕ್ಕೆ ಬಂದವು. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಮಹಾರಾಷ್ಟ್ರದಲ್ಲಿ ಬಿಜೆಪಿ ಪಕ್ಷ ಅಧಿಕಾರ ನಡೆಸಿದ ಪರಿಣಾಮವಾಗಿ ಎತ್ತು ಏರಿಗೆ ಎಳೆಯಿತು ಕೋಣ ನೀರಿಗೆ ಎಳೆಯಿತು ಎಂಬಂತಾಯಿತು ಎಂದಿದ್ದಾರೆ.
ಬೆಳಗಾವಿ ಜಿಲ್ಲೆಯಲ್ಲಿ ಬೇಸಿಗೆ ಸಮಯದಲ್ಲಿ ಕೃಷ್ಣಾ ನದಿ ಸಂಪೂರ್ಣ ಬತ್ತಿ ಹೋಯಿತು. ಕುಡಿಯಲು ನೀರಿಲ್ಲದೆ ನಮ್ಮ ಜಿಲ್ಲೆಯ ಜನ ಪರಿತಪಿಸಿದ್ದಾರೆ. ಆ ಸಮಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದ ಪರಿಣಾಮ ಮಹಾರಾಷ್ಟ್ರ ಸರ್ಕಾರಕ್ಕೆ ಸರಿಯಾದ ಮಾಹಿತಿ ನೀಡದೆ, ಬೆಳಗಾವಿ ಜಿಲ್ಲೆಯ ಜನರನ್ನ ಸಂಕಷ್ಟಕ್ಕೆ ನೂಕಿದರು. ಸರ್ಕಾರದ ಸಮನ್ವಯ ಕೊರತೆಯಿಂದ ಕೃಷ್ಣಾ ತೀರದ ರೈತರು ಕಷ್ಟ ಅನುಭವಿಸಿದರು. ಇದೀಗ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಇದೆ. ಮತ್ತೆ ಮಹಾರಾಷ್ಟ್ರದಲ್ಲೂ ಬಿಜೆಪಿ ಸರ್ಕಾರ ರಚನೆ ಮಾಡುವುದರಿಂದ ಗಡಿ ಜಿಲ್ಲೆ ಅಭಿವೃದ್ಧಿ ಕಾಣಲು ಸಾಧ್ಯ ಎಂದರು.
ಮುಖ್ಯಂತ್ರಿ ಯಡಿಯೂರಪ್ಪ ಮತ್ತು ಡಿಸಿಎಂ ಲಕ್ಷ್ಮಣ ಸವದಿಗೆ ಬಬಲೇಶ್ವರ ಮತಕ್ಷೇತ್ರದ ಬಿಜೆಪಿ ಮುಖಂಡ ವಿಜುಗೌಡ ಪಾಟೀಲ್ ಕೂಡ ಸಾಥ್ ನೀಡಿದರು.