ಕರ್ನಾಟಕ

karnataka

ETV Bharat / state

ಇನ್ನೂ 3 ವರ್ಷಗಳ ಕಾಲ ಬಿಎಸ್​ವೈ ಅವರೇ ಸಿಎಂ: ಶಂಕರಗೌಡ ಪಾಟೀಲ - Shankaragowda Patil press conference in Belgaum

ರಾಜ್ಯದಲ್ಲಿ ಸಿಎಂ ಬಿಎಸ್​ವೈ ಬದಲಾವಣೆ ಕುರಿತು ಮಾಧ್ಯಮಗಳಲ್ಲಿ ಕೇಳಿ ಬರುತ್ತಿರುವ ಕೂಗು ಶುದ್ಧ ಸುಳ್ಳು ಎಂದು ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಶಂಕರಗೌಡ ಪಾಟೀಲ್ ತಿಳಿಸಿದ್ದಾರೆ.

Shankargowda Patil
ಶಂಕರಗೌಡ ಪಾಟೀಲ್

By

Published : Oct 26, 2020, 7:01 PM IST

ಬೆಳಗಾವಿ: ಮುಂಬರುವ ಮೂರು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಸಿಎಂ ಯಡಿಯೂರಪ್ಪನವರೇ ಮುಂದುವರೆಯಲಿದ್ದು, ನಂತರ ಬರುವ ಮುಂದಿನ ಚುನಾವಣೆ ಕೂಡ ಯಡಿಯೂರಪ್ಪನವರ ನೇತೃತ್ವದಲ್ಲಿಯೇ ಎದುರಿಸುತ್ತೇವೆ ಎಂದು ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಶಂಕರಗೌಡ ಪಾಟೀಲ ಹೇಳಿದರು.

ಶಂಕರಗೌಡ ಪಾಟೀಲ್ ಮಾತನಾಡಿದರು
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸಿಎಂ ಬಿಎಸ್​ವೈ ಬದಲಾವಣೆ ಕುರಿತು ಮಾಧ್ಯಮಗಳಲ್ಲಿ ಕೇಳಿ ಬರುತ್ತಿರುವ ಕೂಗು ಶುದ್ಧ ಸುಳ್ಳು. ಯಡಿಯೂರಪ್ಪ ಮುಂದಿನ ಮೂರು ವರ್ಷ ಮುಖ್ಯಮಂತ್ರಿಗಳಾಗಿ ಅವಧಿಯನ್ನು ಅವರೇ ಪೂರ್ಣಗೊಳಿಸಲಿದ್ದಾರೆ. ಕರ್ನಾಟಕ ರಾಜ್ಯವನ್ನು ಸುವರ್ಣ ಕರ್ನಾಟಕ ರಾಜ್ಯವನ್ನಾಗಿ ಮಾಡುವ ಮೂಲಕ ರಾಜ್ಯದ ಪ್ರತಿಯೊಬ್ಬ ಸಾಮಾನ್ಯ ಜನರಿಗೂ ಅನುಕೂಲ ಆಗುವ ಯೋಜನೆಗಳನ್ನು ಜಾರಿಗೊಳಿಸಲಿದ್ದಾರೆ ಎಂದರು.
ಬೆಳಗಾವಿ ಲೋಕಸಭೆ ಬೈಎಲೆಕ್ಷನ್​ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಸೇರಿದಂತೆ ಹಲವು ಹಿರಿಯ ನಾಯಕರು ಸುರೇಶ ಅಂಗಡಿಯವರ ಕುಟುಂಬಕ್ಕೆ ಟಿಕೆಟ್ ನೀಡಬೇಕೆಂದು ಅಭಿಪ್ರಾಯವನ್ನು ತಿಳಿಸಲಾಗಿದೆ. ಹೀಗಾಗಿ, ಅಂತಿಮವಾಗಿ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವೆಲ್ಲರೂ ಬದ್ಧ ಎಂದರು.
ಪ್ರಕಾಶ ಹುಕ್ಕೇರಿ ಹೇಳಿಕೆ ಸಂಬಂಧ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, ಆ ಕುರಿತು ಉತ್ತರ ಕೊಟ್ಟಿದ್ದಾರೆ. ಹೀಗಾಗಿ ನಾನು ಉತ್ತರ ಕೊಡುವ ಅವಶ್ಯಕತೆಯಿಲ್ಲ. ಬಿಜೆಪಿ ಓರ್ವ ವ್ಯಕ್ತಿಯ ಪಕ್ಷ ಅಲ್ಲ, ಸಾಮೂಹಿಕ ಸಂಘಟನೆ ಹೊಂದಿರುವ ಪಕ್ಷ. ಹೀಗಾಗಿ ರಾಜ್ಯಾಧ್ಯಕ್ಷ ಕಟೀಲ್ ಸೇರಿದಂತೆ ಹಿರಿಯ ನಾಯಕರು ನಿರ್ಧಾರ ಕೈಗೊಳ್ಳುತ್ತಾರೆ ಎಂದು ತಿಳಿಸಿದರು.

ಕಾಂಗ್ರೆಸ್‍ನ ಐವರು ಶಾಸಕರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬ ಡಿಸಿಎಂ ಲಕ್ಷ್ಮಣ್ ಸವದಿ ಹೇಳಿಕೆ ಸತ್ಯಕ್ಕೆ ಸಮೀಪವಾಗಿದೆ. ಇನ್ನು ಕಾಂಗ್ರೆಸ್ ಅಷ್ಟೇ ಅಲ್ಲ, ಬೇರೆ ಬೇರೆ ಪಕ್ಷಗಳ ನಾಯಕರು ಬಿಜೆಪಿ ಪಕ್ಷ ಸೇರಲಿದ್ದಾರೆ ಎಂದು ತಿಳಿಸಿದರು.

For All Latest Updates

TAGGED:

ABOUT THE AUTHOR

...view details