ಬೆಳಗಾವಿ: ಗೋಕಾಕ್ ತಾಲೂಕಿನ ಗೊಡ್ಚಿನಮಲ್ಕಿ ಗ್ರಾಮದ ಹೊರವಲಯದಲ್ಲಿರುವ ಆಲದ ಮರವೊಂದಕ್ಕೆ ಚಾಲಕನ ನಿಯಂತ್ರಣ ತಪ್ಪಿದ ಬಸ್ ಡಿಕ್ಕಿ ಹೊಡೆದಿದೆ.
ಗೋಕಾಕ್ನಿಂದ ಬೆಳಗಾವಿ ಕಡೆಗೆ ಹೊರಟಿದ್ದ ಬಸ್, ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್ ಮುಂಭಾಗ ನುಜ್ಜುಗುಜ್ಜಾಗಿದ್ದು, ಮುಂಬದಿಯಲ್ಲಿ ಕುಳಿತಿದ್ದ ಪ್ರಯಾಣಿಕರು ಹಾಗೂ ಬಸ್ ಚಾಲಕನಿಗೆ ಗಂಭೀರ ಗಾಯಗಳಾಗಿವೆ.
ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಬಸ್ ಓದಿ:ನಾಡ ಬಂದೂಕು ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ
ಅದೃಷ್ಟವಶಾತ್ ಬಸ್ನಲ್ಲಿದ್ದ ಶಾಲಾ-ಕಾಲೇಜು ಮಕ್ಕಳು ಹಾಗೂ ಇನ್ನುಳಿದ ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಗೋಕಾಕ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಗೋಕಾಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.