ಕರ್ನಾಟಕ

karnataka

ETV Bharat / state

ಮಹಾರಾಷ್ಟ್ರ- ಕರ್ನಾಟಕ ನಡುವಿನ ಬಸ್ ಸಂಚಾರ ಬಂದ್​​ - ಮಹಾರಾಷ್ಟ್ರ ಹಾಗೂ ಕರ್ನಾಟಕ ನಡುವಿನ ಬಸ್ ಸಂಚಾರ ಬಂದ್​​

ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿಯಲ್ಲಿ ಮತ್ತೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಉಭಯ ರಾಜ್ಯಗಳ ನಡುವಿನ ಬಸ್ ಸಂಚಾರ ಬಂದ್ ಮಾಡಲಾಗಿದೆ.

bus
ಬಸ್ ಸಂಚಾರ ಬಂದ್​​

By

Published : Jan 17, 2020, 7:13 PM IST

ಚಿಕ್ಕೋಡಿ/ಬೆಳಗಾವಿ:ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಎರಡೂ ರಾಜ್ಯಗಳ ನಡುವಿನ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ.

ಬೆಳಗಾವಿಯಲ್ಲಿ ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಂದ್ರ ಪಾಟೀಲ ಅವರನ್ನು ಪೊಲೀಸರು ವಶಕ್ಕೆ ಪಡೆದ ಹಿನ್ನೆಲೆಯಲ್ಲಿ ಮುಂಜಾಗರೂಕತಾ ಕ್ರಮವಾಗಿ ಬಸ್ ಸಂಚಾರವನ್ನು ಸಂಪೂರ್ಣವಾಗಿ ನಿಲ್ಲಿಸಲಾಗಿದೆ.

ಬಸ್ ಸಂಚಾರ ಬಂದ್​​

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಬಸ್ ನಿಲ್ದಾಣದಲ್ಲಿ ಕೆಎಸ್ಆರ್​​​ಟಿಸಿ ಬಸ್​​ಗಳನ್ನು ಸ್ಥಗಿತಗೊಳಿಸಲಾಗಿದ್ದು, ಮಹಾರಾಷ್ಟ್ರದಲ್ಲಿ ಶಿವಸೇನೆ ಪುಂಡಾಟಿಕೆ ಪ್ರದರ್ಶಿಸಿ ಬಸ್​​ಗೆ ಹಾನಿ ಮಾಡುವ ಸಾಧ್ಯತೆ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಬಸ್ ಸಂಚಾರವನ್ನು ಏಕಾಏಕಿ ಸ್ಥಗಿತಗೊಳಿಸಿರುವ ಕಾರಣ ಪ್ರಯಾಣಿಕರು ಪರದಾಡುವಂತಾಗಿದ್ದು, ಗಡಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

For All Latest Updates

ABOUT THE AUTHOR

...view details