ಕರ್ನಾಟಕ

karnataka

ETV Bharat / state

ಕರ್ನಾಟಕ-ಮಹಾರಾಷ್ಟ್ರ ಮಧ್ಯೆ ಬಸ್ ಸಂಚಾರ ಆರಂಭ - ಕರ್ನಾಟಕ ಬಸ್ ಸಂಚಾರ

ಕರ್ನಾಟಕ-ಮಹಾರಾಷ್ಟ್ರ ನಡುವಿನ ಬಸ್ ಸಂಚಾರ ಇಂದಿನಿಂದ ಪುನಾರಂಭಗೊಂಡಿದ್ದು, ಜನರು ನಿಟ್ಟುಸಿರು ಬಿಟ್ಟಿದ್ದಾರೆ.

Bus  service
ಬಸ್ ಸಂಚಾರ ಆರಂಭ

By

Published : Mar 16, 2021, 5:10 PM IST

ಬೆಳಗಾವಿ: ಕಳೆದ ಮೂರು ದಿನಗಳಿಂದ ಬಂದ್ ಆಗಿದ್ದ ಕರ್ನಾಟಕ-ಮಹಾರಾಷ್ಟ್ರ ನಡುವಿನ ಬಸ್ ಸಂಚಾರ ಇಂದಿನಿಂದ ಆರಂಭವಾಗಿದೆ.

ಬೆಳಗಾವಿ ಮತ್ತು ಮಹಾರಾಷ್ಟ್ರ ಗಡಿ ವಿಚಾರವನ್ನು ಮುಂದಿಟ್ಟುಕೊಂಡು ಮಹಾರಾಷ್ಟ್ರದಲ್ಲಿ ಶಿವಸೇನೆ, ಬಸ್​ಗಳಿಗೆ ಹಾಕಲಾಗಿರುವ ಕನ್ನಡ ನಾಮಫಲಕಗಳಿಗೆ ಮಸಿ ಬಳಿದು ಪುಂಡಾಡಿಕೆ ನಡೆಸಿತ್ತು. ಇದರಿಂದಾಗಿ ಕರ್ನಾಟಕದಲ್ಲಿ ಕನ್ನಡಿಗರು ಆಕ್ರೋಶ ಹೊರಹಾಕಿದ ಹಿನ್ನೆಲೆಯಲ್ಲಿ ಬಸ್ ಸಂಚಾರ ಬಂದ್ ಮಾಡಲಾಗಿತ್ತು. ಇದೀಗ ಎರಡೂ ರಾಜ್ಯಗಳ ಅಧಿಕಾರಿಗಳು ಮಾತುಕತೆ ನಡೆಸಿದ್ದು, ಬಳಿಕ ಬಸ್ ಸಂಚಾರ ಪ್ರಾರಂಭಿಸಲಾಗಿದೆ.

ಕಳೆದ ಮೂರು ದಿನಗಳಿಂದ ಬಸ್​ ಸಂಚಾರ ಸ್ಥಗಿತಗೊಂಡಿದ್ದು, ಇದರಿಂದ ಮಹಾರಾಷ್ಟ್ರ ಮತ್ತು ಕರ್ನಾಟಕದ ಜನಸಾಮಾನ್ಯರು ಪರದಾಡುವಂತಾಗಿತ್ತು. ದುಬಾರಿ ಬೆಲೆ ತೆತ್ತು ಟ್ಯಾಕ್ಸಿ, ಟೆಂಪೋಗಳ ಮೂಲಕ ಊರಿಗೆ ತಲುಪುವ ಸ್ಥಿತಿ ಎದುರಾಗಿತ್ತು. ಇದೀಗ ಸಮಸ್ಯೆ ಬಗೆಹರಿದಿದ್ದು, ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ.

ABOUT THE AUTHOR

...view details