ಕರ್ನಾಟಕ

karnataka

ETV Bharat / state

ಮುಂದುವರೆದ ಶಿವಸೇನೆ ಉದ್ಧಟತನ: ಉಭಯ ರಾಜ್ಯಗಳ ಬಸ್ ಸಂಚಾರ ಸ್ಥಗಿತ - ಬಸ್ ಸಂಚಾರ ಸ್ಥಗಿತ

ಮಹಾರಾಷ್ಟ್ರದಲ್ಲಿ ಶಿವಸೇನೆ ಕಾರ್ಯಕರ್ತರು ಉದ್ಧಟತನ ಮೆರೆದಿರುವ ಹಿನ್ನೆಲೆಯಲ್ಲಿ ಇಂದು ಮುನ್ನೆಚ್ಚರಿಕೆ ಕ್ರಮವಾಗಿ ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯಗಳ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

Bus traffic breakdown in Karnataka and Maharashtra
ಮುಂದುವರೆದ ಶಿವಸೇನೆ ಪುಂಡಾಟಿಕೆ: ಉಭಯ ರಾಜ್ಯಗಳ ಬಸ್ ಸಂಚಾರ ಸ್ಥಗಿತ

By

Published : Dec 29, 2019, 10:48 AM IST

ಚಿಕ್ಕೋಡಿ: ಮಹಾರಾಷ್ಟ್ರದಲ್ಲಿ ಶಿವಸೇನೆ ಕಾರ್ಯಕರ್ತರು ಉದ್ಧಟತನ ಮೆರೆದಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಹಾಗೂ ಕರ್ನಾಟಕ ಗಡಿಯಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

ಮುಂದುವರೆದ ಶಿವಸೇನೆ ಉದ್ಧಟತನ: ಉಭಯ ರಾಜ್ಯಗಳ ಬಸ್ ಸಂಚಾರ ಸ್ಥಗಿತ

ನಿನ್ನೆಯಷ್ಟೇ ಮಹಾರಾಷ್ಟ್ರದಲ್ಲಿ ಕನ್ನಡ ಧ್ವಜಕ್ಕೆ ಅಪಮಾನ ಮಾಡಿ ಕನ್ನಡಿಗರ ಭಾವನೆ ಕೆರಳಿಸಿದ ಶಿವಸೇನೆ ಕಾರ್ಯಕರ್ತರ ಉದ್ಧಟತನಕ್ಕೆ ರಾಜ್ಯಾದ್ಯಂತ ಹಲವೆಡೆ ಆಕ್ರೋಶ ವ್ಯಕ್ತವಾಗಿದೆ. ಇದರಿಂದಾಗಿ ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯದ ಗಡಿಯಲ್ಲಿ ವಾತಾವರಣ ಬೂದಿ ಮುಚ್ಚಿದ ಕೆಂಡದಂತಾಗಿದೆ. ಪರಸ್ಪರ ಎರಡೂ ರಾಜ್ಯಗಳಲ್ಲಿ ಮುಖ್ಯಮಂತ್ರಿಗಳ ಪ್ರತಿಕೃತಿ ದಹನದ ಹಿನ್ನೆಲೆಯಲ್ಲಿ ಇಂದು ಮುನ್ನೆಚ್ಚರಿಕೆ ಕ್ರಮವಾಗಿ ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯಗಳ ಬಸ್ ಸಂಚಾರ ಸ್ಥಗಿತವಾಗಿದೆ.

ನಿಪ್ಪಾಣಿ, ಚಿಕ್ಕೋಡಿ, ಅಥಣಿ, ಕಾಗವಾಡದ ಹಲವೆಡೆ ಮಹಾರಾಷ್ಟ್ರದ ಸಾಂಗಲಿ, ಮೀರಜ್, ಕೊಲ್ಹಾಪುರ ಮತ್ತು ಸೊಲ್ಲಾಪುರಗಳಿಗೆ ತೆರಳುತ್ತಿದ್ದ ಬಸ್ ಸಂಚಾರ ಸ್ತಬ್ದವಾಗಿದೆ. ಇದರಿಂದಾಗಿ ಎರಡೂ ರಾಜ್ಯದ ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಮುಂಜಾಗ್ರತಾ ಕ್ರಮವಾಗಿ ಎರಡು ರಾಜ್ಯದ ಬಸ್ ಸಂಚಾರ ಸ್ಥಗಿತಗೊಳಿಸಿದ್ದರಿಂದ ಚಿಕ್ಕೋಡಿ ವಿಭಾಗದ 20ಕ್ಕೂ ಹೆಚ್ಚು ಬಸ್​ಗಳು ಸಂಚಾರ ಸ್ಥಗಿತಗೊಳಿಸಿದ್ದು, ಅಥಣಿ ವಿಭಾಗದ 50 ಕ್ಕೂ ಹೆಚ್ಚು ಬಸ್​ಗಳು ಸ್ಥಗಿತಗೊಂಡಿವೆ.

ABOUT THE AUTHOR

...view details