ಬೆಳಗಾವಿಯ ಮೂರು ಕ್ಷೇತ್ರಗಳ ಉಪ ಚುನಾವಣೆ: ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿದ ಚುನಾವಣಾಧಿಕಾರಿಗಳು
ಬೆಳಗಾವಿ ಜಿಲ್ಲೆಯ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಗೆ ಕ್ಷಣಗಣನೆ ಆರಂಭವಾಗಿದ್ದು, ಚುನಾವಣಾಧಿಕಾರಿಗಳು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಬೆಳಗಾವಿಯ ಆರ್ಪಿಡಿ ಕಾಲೇಜಿನ ಮೂರು ಮಹಡಿಯಲ್ಲಿ ಮತ ಎಣಿಕೆ ನಡೆಯಲಿದ್ದು, ಕೆಳ ಮಹಡಿಯಲ್ಲಿ ಗೋಕಾಕ್, ಮೊದಲ ಮಹಡಿಯಲ್ಲಿ ಅಥಣಿ ಹಾಗೂ ಎರಡನೇ ಮಹಡಿಯಲ್ಲಿ ಕಾಗವಾಡ ಕ್ಷೇತ್ರದ ಮತ ಎಣಿಕೆ ನಡೆಯಲಿದೆ. ಗೋಕಾಕ್ ಕ್ಷೇತ್ರದ ಮತ ಎಣಿಕೆ 21, ಅಥಣಿಗೆ 18 ಹಾಗೂ ಕಾಗವಾಡ ಕ್ಷೇತ್ರದ ಮತ ಎಣಿಕೆ 16 ಸುತ್ತಗಳಲ್ಲಿ ನಡೆಯಲಿದ್ದು, ಬೆಳಗಾವಿ ಮಹಾನಗರ ಪೊಲೀಸ್ ಆಯುಕ್ತ ಲೋಕೇಶ್ ಕುಮಾರ್ ನೇತೃತ್ವದಲ್ಲಿ ಸುಮಾರು 1500ಕ್ಕೂ ಅಧಿಕ ಪೊಲೀಸರನ್ನು ಮತ ಎಣಿಕೆ ಕೇಂದ್ರದ ಸುತ್ತಮುತ್ತ ಭದ್ರತೆಗೆ ನಿಯೋಜನೆ ಮಾಡಲಾಗಿದೆ.
ಚಿಕ್ಕೋಡಿ:ಬೆಳಗಾವಿ ಜಿಲ್ಲೆಯ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಗೆ ಕ್ಷಣಗಣನೆ ಆರಂಭವಾಗಿದ್ದು, ಚುನಾವಣಾಧಿಕಾರಿಗಳು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಬೆಳಗಾವಿಯ ಆರ್ಪಿಡಿ ಕಾಲೇಜಿನ ಮೂರು ಮಹಡಿಯಲ್ಲಿ ಮತ ಎಣಿಕೆ ನಡೆಯಲಿದ್ದು, ಕೆಳ ಮಹಡಿಯಲ್ಲಿ ಗೋಕಾಕ್, ಮೊದಲ ಮಹಡಿಯಲ್ಲಿ ಅಥಣಿ ಹಾಗೂ ಎರಡನೇ ಮಹಡಿಯಲ್ಲಿ ಕಾಗವಾಡ ಕ್ಷೇತ್ರದ ಮತ ಎಣಿಕೆ ನಡೆಯಲಿದೆ. ಗೋಕಾಕ್ ಕ್ಷೇತ್ರದ ಮತ ಎಣಿಕೆ 21, ಅಥಣಿಗೆ 18 ಹಾಗೂ ಕಾಗವಾಡ ಕ್ಷೇತ್ರದ ಮತ ಎಣಿಕೆ 16 ಸುತ್ತಗಳಲ್ಲಿ ನಡೆಯಲಿದ್ದು, ಬೆಳಗಾವಿ ಮಹಾನಗರ ಪೊಲೀಸ್ ಆಯುಕ್ತ ಲೋಕೇಶ್ ಕುಮಾರ್ ನೇತೃತ್ವದಲ್ಲಿ ಸುಮಾರು 1500ಕ್ಕೂ ಅಧಿಕ ಪೊಲೀಸರನ್ನು ಮತ ಎಣಿಕೆ ಕೇಂದ್ರದ ಸುತ್ತಮುತ್ತ ಭದ್ರತೆಗೆ ನಿಯೋಜನೆ ಮಾಡಲಾಗಿದೆ.