ಸಂಪುಟ ವಿಸ್ತರಣೆ ಸಿಎಂ ಯಡಿಯೂರಪ್ಪ ಅವರದ್ದೇ ಪರಮಾಧಿಕಾರ: ಬಿಜೆಪಿ ರಾಜ್ಯ ಉಸ್ತುವಾರಿ - ಸಂಪುಟ ವಿಸ್ತರಣೆ ಸಿಎಂ ಯಡಿಯೂರಪ್ಪನವರ ಪರಮಾಧಿಕಾರ
17:28 December 05
ಸಂಪುಟ ವಿಸ್ತರಣೆ ಸಿಎಂ ಅವರದ್ದೇ ಪರಮಾಧಿಕಾರ
ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಕಸರತ್ತು ನಡೆಯುತ್ತಿದ್ದು, ಸಂಪುಟ ವಿಸ್ತರಣೆ ಸಿಎಂ ಯಡಿಯೂರಪ್ಪ ಅವರ ಪರಮಾಧಿಕಾರ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಸಿಎಂ ಪರಮಾಧಿಕಾರಕ್ಕೆ ಬಿಟ್ಟಿದ್ದು. ಅವರೇ ತೀರ್ಮಾನ ಕೈಗೊಳ್ಳುತ್ತಾರೆ ಎಂದರು.
ಈವರೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಹೈಕಮಾಂಡ್ ಅನುಮತಿ ಸಿಕ್ಕ ಕೂಡಲೇ ವಿಸ್ತರಣೆ ಮಾಡಲಾಗುತ್ತದೆ ಎನ್ನುತ್ತಿದ್ದರು. ಇದೀಗ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿಕೆ ಭಾರಿ ಮಹತ್ವ ಪಡೆದುಕೊಂಡಿದ್ದು, ಸಚಿವಾಕಾಂಕ್ಷಿಗಳಲ್ಲಿ ಹುಮ್ಮಸ್ಸು ಮೂಡಿಸಿದೆ. ಅಲ್ಲದೇ ಶೀಘ್ರದಲ್ಲೇ ಕ್ಯಾಬಿನೆಟ್ ವಿಸ್ತರಣೆ ಸಾಧ್ಯತೆಯಿದೆ.