ಕರ್ನಾಟಕ

karnataka

ETV Bharat / state

ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದ ಕಾರು, ಇಬ್ಬರ ದುರ್ಮರಣ - ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದ ಕಾರು

ಅಥಣಿ ತಾಲೂಕಿನ ರಡ್ಡೇರಹಟ್ಟಿ ಗ್ರಾಮದಲ್ಲಿ ಕರಿಮಸೂತಿ ಏತ ನೀರಾವರಿ ಕಾಲುವೆಗೆ ಬಿದ್ದ ಕಾರನ್ನು ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಪೊಲೀಸರು ಕ್ರೇನ್​ ಮೂಲಕ ಹೊರತೆಗೆದಿದ್ದಾರೆ.

car-fells-into-canal-at-athani-two-dead
ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದ ಕಾರು, ಇಬ್ಬರ ದುರ್ಮರಣ

By

Published : Jul 8, 2022, 5:00 PM IST

ಅಥಣಿ (ಬೆಳಗಾವಿ):ಚಾಲಕ ನಿಯಂತ್ರಣ ತಪ್ಪಿ ಕಾಲುವೆಗೆ ಕಾರೊಂದು ಬಿದ್ದು, ಇಬ್ಬರು ಮೃತಪಟ್ಟಿರುವ ದುರ್ಘಟನೆ ಅಥಣಿ ತಾಲೂಕಿನ ರಡ್ಡೇರಹಟ್ಟಿ ಗ್ರಾಮದಲ್ಲಿ ನಡೆದಿದೆ. ಮಹಾದೇವ ಚಿಗರಿ (26) ಮತ್ತು ಸುರೇಶ ಬಡಚಿ (27) ಎಂಬುವವರೇ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.

ಕರಿಮಸೂತಿ ಏತ ನೀರಾವರಿ ಕಾಲುವೆಗೆ ಕಾರು ಬಿದ್ದು ಈ ದುರಂತ ಸಂಭವಿಸಿದೆ. ಎಂಹೆಚ್​​ 05-ಎಬಿ 6674 ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದರು. ಈ ವೇಳೆ, ಚಾಲಕನ ನಿಯಂತ್ರಣ ತಪ್ಪಿ ಕಾಲುವಿಗೆ ಕಾರು ಬಿದ್ದಿದೆ. ಮೃತ ಮಹಾದೇಶ ಹಾಗೂ ಸುರೇಶ ರಡ್ಡೇರಹಟ್ಟಿ ಗ್ರಾಮದವರು ಎಂದು ತಿಳಿದು ಬಂದಿದೆ.

ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದ ಕಾರು, ಇಬ್ಬರ ದುರ್ಮರಣ

ಅದೃಷ್ಟವಶಾತ್ ಈ ಘಟನೆಯಲ್ಲಿ ಘಟನಟ್ಟಿ ಗ್ರಾಮದ ಶ್ರೀಕಾಂತ ನಡುವಿನಮನಿ ಎಂಬ ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಸ್ಥಳಕ್ಕೆ ಅಥಣಿ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಪೊಲೀಸರು ಆಗಮಿಸಿ, ಕ್ರೇನ್​ ಮೂಲಕ ಕಾರು ಹಾಗೂ ಮೃತ ಯುವಕರನ್ನು ಹೊರತೆಗೆದರು.

ಇದನ್ನೂ ಓದಿ:ಬೆಳಗಾವಿಯಲ್ಲಿ ಎರಡು ಸರ್ಕಾರಿ ಬಸ್‌ಗಳ ಮಧ್ಯೆ ಮುಖಾಮುಖಿ ಡಿಕ್ಕಿ: 10ಕ್ಕೂ ಹೆಚ್ಚು ಜನರಿಗೆ ಗಾಯ

ABOUT THE AUTHOR

...view details