ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ನದಿಗೆ ಬಿದ್ದ ಘಟನೆ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದ ದೂಧಗಂಗಾ ಸೇತುವೆ ಬಳಿ ನಡೆದಿದೆ. ಘಟನೆಯಲ್ಲಿ ವಾಹನದಲ್ಲಿದ್ದ ಚಾಲಕ ಪ್ರಾಣಾಪಾಯದಿಂದ ಪಾರಾಗಿರುವ ಶಂಕೆ ವ್ಯಕ್ತವಾಗಿದೆ.
ಬೆಳಗಾವಿಯಿಂದ ಪುಣೆಗೆ ತೆರಳುವ ಸಂದರ್ಭದಲ್ಲಿ ಯಕ್ಸಂಬಾ - ದಾನವಾಡ ಸೇತುವೆ ಮೇಲಿಂದ ಕಾರು ನದಿಗೆ ಬಿದ್ದಿದೆ. ಕಾರಿನಲ್ಲಿ ಒಬ್ಬನೇ ಪ್ರಯಾಣಿಸುತ್ತಿದ್ದ ಎಂದು ಹೇಳಲಾಗುತ್ತಿದ್ದು, ನದಿಗೆ ಬಿದ್ದ ತಕ್ಷಣ ಕಾರಿನ ಗಾಜನ್ನು ಒಡೆದು ಚಾಲಕ ಹೊರಗೆ ಬಂದು ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ.