ಬೆಳಗಾವಿ: ಚುನಾವಣಾ ಪ್ರಚಾರದಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿದ ಹಿನ್ನೆಲೆ ಬೆಳಗಾವಿಯಲ್ಲಿ ಎಐಎಂಐಎಂ(AIMIM) ಮುಖ್ಯಸ್ಥ, ಸಂಸದ ಅಸಾದುದ್ದೀನ್ ಓವೈಸಿ ಸೇರಿ 300ಕ್ಕೂ ಹೆಚ್ಚು ಬೆಂಬಲಿಗರ ವಿರುದ್ಧ ದೂರು ದಾಖಲಾಗಿದೆ.
ಕೋವಿಡ್ ರೂಲ್ಸ್ ಬ್ರೇಕ್: ಅಸಾದುದ್ದೀನ್ ಓವೈಸಿ ಸೇರಿ 300ಕ್ಕೂ ಹೆಚ್ಚು ಬೆಂಬಲಿಗರ ವಿರುದ್ಧ ದೂರು - belguam local fight
ಓವೈಸಿ ನೋಡಲು ಕಿಕ್ಕಿರಿದು ಜನರು ಸೇರಿದ್ದರು. ಸಾಮಾಜಿಕ ಅಂತರ ಕಾಯ್ದುಕೊಳ್ಳದೇ, ಗುಂಪುಗುಂಪಾಗಿ ಸೇರಿ ಕೋವಿಡ್ ರೂಲ್ಸ್ ಬ್ರೇಕ್ ಮಾಡಿದ್ದರು. ಸರ್ಕಾರದ ಕೊರೊನಾ ನಿಯಮಾವಳಿ ಉಲ್ಲಂಘನೆ ಮಾಡಿದ್ದಕ್ಕೆ ಮಹಾನಗರ ಪಾಲಿಕೆ ಚುನಾವಣಾಧಿಕಾರಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಸೆ.3ರಂದು ನಡೆಯುವ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಗೆ ಇದೇ ಮೊದಲ ಬಾರಿಗೆ ಪಕ್ಷದ ಚಿಹ್ನೆಯ ಮೇಲೆ ಸ್ಪರ್ಧೆ ಮಾಡಿರುವ ಎಐಎಂಐಎಂ ಪಕ್ಷದ ಅಭ್ಯರ್ಥಿಗಳ ಪರವಾಗಿ ಸೋಮವಾರ ಪ್ರಚಾರಕ್ಕೆ ಆಗಮಿಸಿದ್ದ ಎಐಎಂಐಎಂ ಪಕ್ಷದ ಸಂಸದ ಅಸಾದುದ್ದೀನ್ ಓವೈಸಿ ಬೆಳಗಾವಿಯ ನಗರದ ದರ್ಬಾರ್ ಗಲ್ಲಿಯಲ್ಲಿ ಚುನಾವಣಾ ರ್ಯಾಲಿ ನಡೆಸಿದ್ದರು.
ಆ ವೇಳೆ ಓವೈಸಿ ನೋಡಲು ಕಿಕ್ಕಿರಿದು ಜನರು ಸೇರಿದ್ದರು. ಸಾಮಾಜಿಕ ಅಂತರ ಕಾಯ್ದುಕೊಳ್ಳದೇ, ಗುಂಪುಗುಂಪಾಗಿ ಸೇರಿ ಕೋವಿಡ್ ರೂಲ್ಸ್ ಬ್ರೇಕ್ ಮಾಡಿದ್ದರು. ಸರ್ಕಾರದ ಕೊರೊನಾ ನಿಯಮಾವಳಿ ಉಲ್ಲಂಘನೆ ಮಾಡಿದ್ದಕ್ಕೆ ಮಹಾನಗರ ಪಾಲಿಕೆ ಚುನಾವಣಾಧಿಕಾರಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಹೀಗಾಗಿ 300ಜನರ ವಿರುದ್ಧ ಬೆಳಗಾವಿಯ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.