ಬೆಳಗಾವಿ: ಧಾರವಾಡ ಜಿ.ಪಂ. ಸದಸ್ಯ ಯೋಗೇಶಗೌಡ ಕೊಲೆ ಪ್ರಕರಣದ ಆರೋಪದಡಿ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಧಾರವಾಡ ನ್ಯಾಯಾಲಯ ಮೂರು ದಿನಗಳ ಕಾಲ ಸಿಬಿಐ ಕಸ್ಟಡಿಗೆ ನೀಡಿದೆ.
ಸಿಬಿಐ ವಶಕ್ಕೆ ವಿನಯ್ ಕುಲಕರ್ಣಿ: ಹಿಂಡಲಗಾ ಜೈಲಿನಿಂದ ರಹಸ್ಯ ಸ್ಥಳಕ್ಕೆ ಕರೆದೊಯ್ದ ಅಧಿಕಾರಿಗಳು
ಯೋಗೇಶ್ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು, ವಿನಯ್ ಕುಲಕರ್ಣಿ ಅವರನ್ನು ವಶಕ್ಕೆ ಪಡೆದಿದ್ದು, ಮೂರು ದಿನಗಳ ಕಾಲ ವಿಚಾರಣೆ ನಡೆಸಲಿದ್ದಾರೆ.
ಸಿಬಿಐ ವಶಕ್ಕೆ ವಿನಯ್ ಕುಲಕರ್ಣಿ
ಬೆಳ್ಳಂಬೆಳಗ್ಗೆ ಹಿಂಡಲಗಾ ಜೈಲಿಗೆ ಆಗಮಿಸಿದ ಸಿಬಿಐ ಅಧಿಕಾರಿಗಳು 7.30ರ ಸುಮಾರಿಗೆ ಮಾಜಿ ಸಚಿವರನ್ನು ಜೈಲಿನಿಂದ ಕರೆದೊಯ್ದರು. ನಿನ್ನೆ ರಾತ್ರಿಯೇ ನಗರಕ್ಕೆ ಆಗಮಿಸಿದ್ದ ಅಧಿಕಾರಿಗಳು ಖಾಸಗಿ ಲಾಡ್ಜ್ನಲ್ಲಿ ತಂಗಿದ್ದರು. ಬೆಳಗ್ಗೆ 6.30ಕ್ಕೆ ಜೈಲಿಗೆ ಆಗಮಿಸಿದ ಅಧಿಕಾರಿಗಳು ಕೋರ್ಟ್ ಆದೇಶ ಪ್ರತಿಯನ್ನು ಜೈಲಾಧಿಕಾರಿಗಳಿಗೆ ನೀಡಿ, ವಿನಯ್ ಕುಲಕರ್ಣಿ ಅವರನ್ನು ರಹಸ್ಯ ಸ್ಥಳಕ್ಕೆ ಕರೆದೊಯ್ದರು.
ಯೋಗೇಶ್ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು, ವಿನಯ್ ಕುಲಕರ್ಣಿ ಅವರನ್ನು ಮೂರು ದಿನಗಳ ಕಾಲ ವಿಚಾರಣೆ ನಡೆಸಲಿದ್ದಾರೆ.