ಕರ್ನಾಟಕ

karnataka

ETV Bharat / state

ಪೀರನವಾಡಿಯಲ್ಲಿ ರಾಯಣ್ಣ ಮೂರ್ತಿಗೆ ಕನ್ನಡಪರ ಸಂಘಟನೆಗಳಿಂದ ಮಾಲಾರ್ಪಣೆ

ಇವತ್ತು ರಣಧೀರ ಪಡೆಯ ಮುಖ್ಯಸ್ಥ ಬಿ ಹರೀಶ್‌ಕುಮಾರ್‌ ನೇತೃತ್ವದಲ್ಲಿ ಕನ್ನಡ ಪರ ಹೋರಾಟಗಾರರು ಸಂಭ್ರಮಾಚರಣೆ ನಡೆಸಿದರು..

ಪೀರನವಾಡಿಯಲ್ಲಿ ರಾಯಣ್ಣ ಮೂರ್ತಿಗೆ ಕನ್ನಡಪರ ಸಂಘಟನೆಗಳಿಂದ ಮಾಲಾರ್ಪಣೆ
ಪೀರನವಾಡಿಯಲ್ಲಿ ರಾಯಣ್ಣ ಮೂರ್ತಿಗೆ ಕನ್ನಡಪರ ಸಂಘಟನೆಗಳಿಂದ ಮಾಲಾರ್ಪಣೆ

By

Published : Sep 6, 2020, 2:57 PM IST

ಬೆಳಗಾವಿ: ತಾಲೂಕಿನ ಪೀರನವಾಡಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ವಿವಾದ ಸುಖಾಂತ್ಯವಾಗಿದೆ. ಈಗ ವಿವಿಧ ಕನ್ನಡಪರ ಪರ ಸಂಘಟನೆಗಳು ಇಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡುತ್ತಿವೆ.

ಪೀರನವಾಡಿಯಲ್ಲಿ ರಾಯಣ್ಣ ಮೂರ್ತಿಗೆ ಕನ್ನಡಪರ ಸಂಘಟನೆಗಳಿಂದ ಮಾಲಾರ್ಪಣೆ

ಇವತ್ತು ರಣಧೀರ ಪಡೆಯ ಮುಖ್ಯಸ್ಥ ಬಿ ಹರೀಶ್‌ಕುಮಾರ್‌ ನೇತೃತ್ವದಲ್ಲಿ ಕನ್ನಡ ಪರ ಹೋರಾಟಗಾರರು ಸಂಭ್ರಮಾಚರಣೆ ನಡೆಸಿದರು. ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ಸಂಧಾನಸಭೆ ಮೂಲಕ ಬಗೆ ಹರಿದಿದೆ. ಕನ್ನಡ ಸ್ವಾಭಿಮಾನದ ಸಂಕೇತ, ಸ್ವಾತಂತ್ರ್ಯ ಸೇನಾನಿ ಸಂಗೊಳ್ಳಿ ರಾಯಣ್ಣ ಈ ದೇಶದ ಆಸ್ತಿ ಅಂತಾ ಬಿ. ಹರೀಶ್‌ಕುಮಾರ್‌ ಇದೇ ವೇಳೆ ಹೇಳಿದರು.

ಕನ್ನಡ ಪರ ಸಂಘಟನೆಗಳು ಸಂಗೊಳ್ಳಿ ರಾಯಣ್ಣನ ಮೂರ್ತಿ‌ ಬಳಿ ಸಂಭ್ರಮಾಚರಣೆ ನಡೆಸುತ್ತಿರುವುದರಿಂದಾಗಿ ಮುಂಜಾಗ್ರತಾ ಕ್ರಮವಾಗಿ ಪೀರನವಾಡಿ ನಾಕಾ ಬಳಿ ಪೊಲೀಸ್ ಇಲಾಖೆಯಿಂದ ಬೀಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.

ABOUT THE AUTHOR

...view details