ಬೆಳಗಾವಿ:ನಗರದ ಹೊರವಲಯದ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಮರು ಪ್ರತಿಷ್ಠಾಪನೆ ಹಿನ್ನೆಲೆ ನಗರದ ಚೆನ್ನಮ್ಮ ವೃತ್ತದಲ್ಲಿ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.
ರಾಯಣ್ಣ ಪುತ್ಥಳಿ ಮರು ಪ್ರತಿಷ್ಠಾಪನೆ: ಕನ್ನಡಪರ ಸಂಘಟನೆಗಳಿಂದ ಸಂಭ್ರಮಾಚರಣೆ - ಬೆಳಗಾವಿಯಲ್ಲಿ ರಾಯಣ್ಣ ಪುತ್ಥಳಿ ಮರುಸ್ಥಾಪನೆ
ಕನ್ನಡಪರ ಸಂಘಟನೆಗಳ ಕ್ರಿಯಾ ಸಮಿತಿಗಳ ಅಧ್ಯಕ್ಷ ಅಶೋಕ ಚಂದರಗಿ, ಕರವೇ ರಾಜ್ಯ ಸಂಚಾಲಕ ಮಹಾದೇವ ತಳವಾರ ಹಾಗೂ ಕರವೇ ಜಿಲ್ಲಾಧ್ಯಕ್ಷ ದೀಪಕ್ ಗುಡಗನಟ್ಟಿ ನೇತೃತ್ವದಲ್ಲಿ ಸಂಭ್ರಮಾಚರಣೆ ನಡೆಸಲಾಯಿತು.
![ರಾಯಣ್ಣ ಪುತ್ಥಳಿ ಮರು ಪ್ರತಿಷ್ಠಾಪನೆ: ಕನ್ನಡಪರ ಸಂಘಟನೆಗಳಿಂದ ಸಂಭ್ರಮಾಚರಣೆ Celebration by pro-Kannada organizations in Belgavi](https://etvbharatimages.akamaized.net/etvbharat/prod-images/768-512-8588874-thumbnail-3x2-hrs.jpg)
ಕನ್ನಡ ಪರ ಸಂಘಟನೆಗಳಿಂದ ಸಂಭ್ರಮಾಚರಣೆ
ಕನ್ನಡಪರ ಸಂಘಟನೆಗಳ ಕ್ರಿಯಾ ಸಮಿತಿಗಳ ಅಧ್ಯಕ್ಷ ಅಶೋಕ ಚಂದರಗಿ, ಕರವೇ ರಾಜ್ಯ ಸಂಚಾಲಕ ಮಹಾದೇವ ತಳವಾರ ಹಾಗೂ ಕರವೇ ಜಿಲ್ಲಾಧ್ಯಕ್ಷ ದೀಪಕ್ ಗುಡಗನಟ್ಟಿ ನೇತೃತ್ವದಲ್ಲಿ ಸಂಭ್ರಮಾಚರಣೆ ನಡೆಸಲಾಯಿತು.
ಕನ್ನಡಪರ ಸಂಘಟನೆಗಳಿಂದ ಸಂಭ್ರಮಾಚರಣೆ
ಕನ್ನಡಪರ ಸಂಘಟನೆ ಮುಖಂಡರು, ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಕರವೇ ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯಕರ್ತರು ಭಾಗಿಯಾಗಿದ್ದರು. ಬಳಿಕ ಡಿಸಿ ಕಚೇರಿ ಆವರಣದಲ್ಲಿರುವ ರಾಯಣ್ಣ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಕಾರ್ಯಕರ್ತರು, ರಾಯಣ್ಣ ಪರ ಘೋಷಣೆ ಕೂಗಿ ಸಂತಸ ವ್ಯಕ್ತಪಡಿಸಿದರು.