ಬೆಳಗಾವಿ:ದೇಶದಲ್ಲಿ ಕೊರೊನಾ ನಿಯಂತ್ರಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿಫಲವಾಗಿವೆ ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಕೊರೊನಾ ನಿಯಂತ್ರಿಸುವಲ್ಲಿ ಕೇಂದ್ರ, ರಾಜ್ಯ ಸರ್ಕಾರ ವಿಫಲ: ಉಗ್ರಪ್ಪ - Former MP Ugrappa
ಮೀಸಲಾತಿ ವಿಚಾರದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಕುಂಭಕರ್ಣ ನಿದ್ರೆಗೆ ಜಾರಿರುವುದೇ ಸಮಸ್ಯೆಗೆ ಕಾರಣ ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ದೂರಿದರು.
ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಕಳೆದ ವರ್ಷದ ಆರಂಭದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕೊರೊನಾ ಪ್ರಕರಣಗಳು ಇರಲಿಲ್ಲ. ಇಂತಹ ವೇಳೆ ಕೇಂದ್ರ ಸರ್ಕಾರ ಮುಂದಾಲೋಚನೆ ಮಾಡದೇ ಲಾಕ್ಡೌನ್ ಜಾರಿಗೊಳಿಸಿತು. ಕೊರೊನಾ ನಿಯಂತ್ರಿಸುವ ವಿಚಾರದಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳಿಗೆ ಬದ್ಧತೆಯಿಲ್ಲ. ಇದರಿಂದ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಸರ್ಕಾರಕ್ಕೆ ಬುದ್ಧಿ ಇದ್ದರೆ ಗಡಿ ಭಾಗಗಳಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು.
ತಕ್ಷಣವೇ ಗಡಿ ಭಾಗಗಳಲ್ಲಿ ಮುನ್ನೆಚ್ಚರಿಕೆ ವಹಿಸಬೇಕು. ಮೀಸಲಾತಿ ಹಂಚಿಕೆ ವಿಚಾರವನ್ನು ಸಂವಿಧಾನದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಕೇಂದ್ರ, ರಾಜ್ಯ ಸರ್ಕಾರಗಳಿಗೆ ಇದರ ಅರಿವು ಇದ್ದಂತಿಲ್ಲ. ಅರಿವಿದ್ದಿದ್ದರೆ ಬೇರೆ ಬೇರೆ ಸಮುದಾಯದವರು ಹೋರಾಟ ಮಾಡುವ ಪರಿಸ್ಥಿತಿ ನಿರ್ಮಾಣವಾಗುತ್ತಿರಲಿಲ್ಲ ಎಂದಿದ್ದಾರೆ.