ಅಥಣಿ / ಚಿಕ್ಕೋಡಿ: ನಿಷೇಧಾಜ್ಞೆ ಹಿನ್ನೆಲೆ ಅಥಣಿ ಹಾಗೂ ಚಿಕ್ಕೋಡಿ ಪಟ್ಟಣಗಳು ಸಂಪೂರ್ಣ ಸ್ಥಬ್ಧವಾಗಿವೆ.
ಕೇಂದ್ರ ಸರ್ಕಾರದ ಮಾರ್ಗಸೂಚಿಯ ಪ್ರಕಾರ ಪ್ರತಿ ಭಾನುವಾರ ಸಂಪೂರ್ಣ ಲಾಕ್ ಡೌನ್ ಘೋಷಿಸಲಾಗಿದೆ. ಈ ಅನ್ವಯ ಶನಿವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಗ್ಗೆ 7 ಗಂಟೆಯವರೆಗೆ ಅಥಣಿ ತಾಲೂಕಿನಲ್ಲೂ ಕರ್ಫ್ಯೂ ಮಾದರಿ ಲಾಕ್ ಡೌನ್ ಜಾರಿಯಾಗಿದೆ.
ಚಿಕ್ಕೋಡಿ, ಅಥಣಿಯಲ್ಲಿ ಸಂಪೂರ್ಣ ಬಂದ್ ಅಥಣಿ ಪಟ್ಟಣದಲ್ಲಿ ವಾಣಿಜ್ಯ ಮಳಿಗೆಗಳು, ಬಸ್, ಆಟೋ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ತುರ್ತು ವಾಹನಗಳಿಗೆ, ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಅಗತ್ಯ ವಸ್ತುಗಳು, ಆಸ್ಪತ್ರೆ, ಔಷದ ಮಳಿಗೆಗಳು ತೆರೆದಿವೆ.
ಇನ್ನೂ ಚಿಕ್ಕೋಡಿಯಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ದಿನಸಿ, ಹಾಲು, ತರಕಾರಿ, ಮಾಂಸ ಮಾರಾಟಕ್ಕೆ ಅನುಮತಿ ನೀಡಲಾಗದೆ. ಉಳಿದಂತೆ ಸಾರಿಗೆ ಸಂಚಾರ ಸಂಪೂರ್ಣ ಬಂದ್ ಮಾಡಲಾಗಿದೆ.
ತುರ್ತು ವಾಹನಗಳನ್ನು ಹೊರತು ಪಡಿಸಿ ಬೇರೆ ವಾಹನಗಳಿಗೆ ಅವಕಾಶವಿಲ್ಲ. ಎಪಿಎಂಸಿ ಮಾರುಕಟ್ಟೆ ಸಹಿತ ಬಂದ್ ಮಾಡಲಾಗಿದೆ. ಕರ್ಪ್ಯೂ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಪ್ರತಿ ರಸ್ತೆಗೂ ಬ್ಯಾರಿಕೇಡ್ ಹಾಕಿ ತಪಾಸಣೆ ನಡೆಸುತ್ತಿದ್ದಾರೆ.