ಕರ್ನಾಟಕ

karnataka

ETV Bharat / state

ಕೇಂದ್ರ ನೆರೆ ಪ್ರಸ್ತಾವ ತಿರಿಸ್ಕರಿಸಿದೆ ಅಂತಾ ಡಿಸಿಎಂ ಹೇಳಿದ್ರೇ,, ಇಲ್ಲ ತಿರಸ್ಕರಿಸಿಲ್ಲ ಅಂತಾವ್ರೇ ಸಿಎಂ.. - ರಾಜ್ಯ ಸರ್ಕಾರ

ಮೂರ್ನಾಲ್ಕು ದಿನಗಳಲ್ಲಿ ರಾಜ್ಯ ಸರ್ಕಾರಕ್ಕೆ ಕೇಂದ್ರದ ಪರಿಹಾರ ಹಣ ಬಿಡುಗಡೆ ಆಗಲಿದೆ. ದೇಶದ ಯಾವ ನೆರೆ ಪೀಡಿತ ರಾಜ್ಯಗಳಿಗೂ ಪರಿಹಾರ ಬಿಡುಗಡೆ ಆಗಿಲ್ಲ. ರಾಜ್ಯಕ್ಕೆ ಕೇಂದ್ರದಿಂದ ಹೆಚ್ಚಿನ‌ ಪ್ರಮಾಣದಲ್ಲಿ ಪರಿಹಾರ ಬಿಡುಗಡೆ ಆಗುವ ವಿಶ್ವಾಸ ಇದೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು.

ಯಡಿಯೂರಪ್ಪ

By

Published : Oct 4, 2019, 10:34 AM IST

ಬೆಳಗಾವಿ:ರಾಜ್ಯದ ಪ್ರವಾಹ ಪರಿಹಾರದ ವರದಿಯನ್ನು ಕೇಂದ್ರ ತಿರಸ್ಕರಿಸಿಲ್ಲ ಎಂದು‌ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಬಿ ಎಸ್ ಯಡಿಯೂರಪ್ಪ, ಮುಖ್ಯಮಂತ್ರಿ

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಪ್ರಸ್ತಾಪ ಹಾಗೂ ಕೇಂದ್ರ ತಂಡದ ವರದಿ ಹೊಂದಾಣಿಕೆ ಆಗುತ್ತಿಲ್ಲ. ಈ ಬಗ್ಗೆ ಪರಿಶೀಲಿಸಬೇಕಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಇದಕ್ಕಾಗಿ ನಮ್ಮ ಇಬ್ಬರು ಅಧಿಕಾರಿಗಳನ್ನು ದೆಹಲಿಗೆ ಕಳಿಸಲಾಗಿದೆ. ಕೇಂದ್ರ ಸರ್ಕಾರ ರಾಜ್ಯದ ವರದಿಯನ್ನು ತಿರಸ್ಕರಿಸಿದೆ ಎಂಬುದು ಸುಳ್ಳು ಎಂದು ಪ್ರತಿಕ್ರಿಯೆ ನೀಡಿದರು.

ಈಗಾಗಲೇ ಕೇಂದ್ರದ ಎಲ್ಲ ಸಚಿವರೊಂದಿಗೆ ಮಾತನಾಡಿದ್ದೇನೆ. ಮೂರ್ನಾಲ್ಕು ದಿನಗಳಲ್ಲಿ ರಾಜ್ಯ ಸರ್ಕಾರಕ್ಕೆ ಕೇಂದ್ರದ ಪರಿಹಾರ ಹಣ ಬಿಡುಗಡೆ ಆಗಲಿದೆ. ದೇಶದ ಯಾವ ನೆರೆ ಪೀಡಿತ ರಾಜ್ಯಗಳಿಗೂ ಪರಿಹಾರ ಬಿಡುಗಡೆ ಆಗಿಲ್ಲ. ರಾಜ್ಯಕ್ಕೆ ಕೇಂದ್ರದಿಂದ ಹೆಚ್ಚಿನ‌ ಪ್ರಮಾಣದಲ್ಲಿ ಪರಿಹಾರ ಬಿಡುಗಡೆ ಆಗುವ ವಿಶ್ವಾಸ ಇದೆ ಎಂದರು.

ಇನ್ನು, ರಾಜ್ಯ ಸರ್ಕಾರದ ಬೊಕ್ಕಸ ಖಾಲಿ ಆಗಿಲ್ಲ. ಖಾಲಿ ಆಗಿದ್ದರೆ ಪ್ರವಾಹ ಪರಿಹಾರಕ್ಕೆ ‌ಇಷ್ಟೊಂದು ಹಣ ನೀಡಲು ಆಗುತ್ತಿರಲಿಲ್ಲ. ಮುಂದಿನ ಬಜೆಟ್​​​ನಲ್ಲಿ ಪ್ರವಾಹ ಪುನರ್ವಸತಿಗೆ ಹೆಚ್ಚಿನ ಹಣ ಮೀಸಲಿಡುತ್ತೇವೆ ಎಂದು ತಿಳಿಸಿದ್ದಾರೆ.

ABOUT THE AUTHOR

...view details