ಕರ್ನಾಟಕ

karnataka

ETV Bharat / state

ರಾಜ್ಯ ಬಿಜೆಪಿಯಲ್ಲಿ ಭಿನ್ನಮತ ವಿಚಾರ: ಸುರೇಶ್​ ಅಂಗಡಿ ಪ್ರತಿಕ್ರಿಯೆ ಏನು? - ಬಿಜೆಪಿ ಪಕ್ಷದ ಬಂಡಯಾದ ವಿಚಾರ

ಬಿಜೆಪಿಯಲ್ಲಿನ ಭಿನ್ನಮತ ಕುರಿತು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್​ ಅಂಗಡಿ ಪ್ರತಿಕ್ರಿಯೆ ನೀಡಿದ್ದು, ಪಕ್ಷದಲ್ಲಿ ಯಾವುದೇ ರೀತಿಯ ಭಿನ್ನಮತದ ವಾತವರಣವಿಲ್ಲ. ಪಕ್ಷದಲ್ಲಿ ಏನೇ ಸಮಸ್ಯೆ ಉದ್ಭವಿಸಿದರೂ ಅದನ್ನು ಸಮರ್ಥವಾಗಿ ನಿಭಾಯಿಸುವ ‌ಶಕ್ತಿ ಬಿಜೆಪಿಗಿದೆ ಎಂದಿದ್ದಾರೆ.

Central Minister Suresh Angadi
ಕೇಂದ್ರ ಸಚಿವ ಸುರೇಶ್​ ಅಂಗಡಿ

By

Published : May 29, 2020, 1:30 PM IST

ಬೆಳಗಾವಿ:ಪಕ್ಷದಲ್ಲಿ ಯಾವುದೇ ರೀತಿಯ ಭಿನ್ನಮತದ ವಾತವರಣ ಇಲ್ಲ. ಪಕ್ಷದಲ್ಲಿ ಏನೇ ಸಮಸ್ಯೆ ಉದ್ಭವಿಸಿದರೂ ಅದನ್ನು ಸಮರ್ಥವಾಗಿ ನಿಭಾಯಿಸುವ ‌ಶಕ್ತಿ ಬಿಜೆಪಿಗಿದೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್​ ಅಂಗಡಿ ಹೇಳಿದರು.

ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್​ ಅಂಗಡಿ

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ‌ ಕೇಂದ್ರದಲ್ಲಿ ನರೇಂದ್ರ ಮೋದಿಯವರು ಸದೃಢ ಸರ್ಕಾರ ನಡೆಸುತ್ತಿದ್ದು, ಇತಂಹ ಸಮಸ್ಯೆ ನಿಭಾಯಿಸುವ ಸಮರ್ಥ‌ ಶಕ್ತಿ ಪಕ್ಷಕ್ಕಿದೆ ಎಂದರು.

ನಮ್ಮ ಪಕ್ಷದಲ್ಲಿ ಯಾವುದೇ ತರಹದ ಭಿನ್ನಮತ ಇಲ್ಲ. ಪಕ್ಷದಲ್ಲಿ ಯಾರಿಗೆ ಟಿಕೆಟ್ ನೀಡುತ್ತಾರೋ ಅವರ ಪರವಾಗಿ ಕೆಲಸ ಮಾಡುವ ವ್ಯವಸ್ಥೆ ಬಿಜೆಪಿಯಲ್ಲಿದೆ‌. ಯಾರೂ ಇದರ ಬಗ್ಗೆ ತಲೆ ಕೆಡಿಸಿಕೊಳ್ಳವ ಅವಶ್ಯಕತೆ ಇಲ್ಲ. ಇಂತಹ ವಿಚಾರಗಳನ್ನು ಮುಖ್ಯಮಂತ್ರಿ ಹಾಗೂ ನಳಿನ್​ ಕುಮಾರ್​ ಕಟೀಲ್ ಸಮರ್ಥವಾಗಿ ನಿಭಾಯಿಸಲಿದ್ದಾರೆ. ನಾಲ್ಕು ಬಾರಿ ಸಿಎಂ ಆಗಿರುವ ಯಡಿಯೂರಪ್ಪನವರು ಅನುಭವಿ, ಹಿರಿಯ ರಾಜಕಾರಣಿಗಳಾಗಿದ್ದಾರೆ. ಇದನ್ನು ನಿಭಾಯಿಸುವ ಶಕ್ತಿ ಅವರಿಗಿದೆ ಎಂದು ಎಂದರು.

ಉಮೇಶ್​ ಕತ್ತಿಯವರು ಈ ಥರದ ಹೇಳಿಕೆಗಳನ್ನು ನೀಡಬಾರದು. ಪಕ್ಷದಲ್ಲಿ ಆಂತರಿಕ ಸಮಸ್ಯೆಗಳಿದ್ದರೆ ಅದನ್ನು ಪಕ್ಷದಲ್ಲಿಯೇ ಚರ್ಚೆ ನಡೆಸಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಸಮಸ್ಯೆ ಪರಿಹರಿಸಿಕೊಳ್ಳಬೇಕು. ಆಸೆ ಎಲ್ಲರಿಗೂ ಇರುತ್ತದೆ. ಹಾಗಂತ ರಸ್ತೆಯಲ್ಲಿ ಎಲ್ಲೆಂದರಲ್ಲಿ ಹೇಳಿಕೊಳ್ಳಲು ಬರತ್ತಾ? ಇಂತಹ ವಿಚಾರಗಳನ್ನು ಪಕ್ಷದ ವೇದಿಕೆಯಲ್ಲಿ ಮುಖ್ಯಂತ್ರಿಗಳ ಹತ್ತಿರ ಕುಳಿತು ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದರು.

ನಿನ್ನೆ ಸಂಪುಟ ಸಭೆ ಇತ್ತು. ಅದಕ್ಕೆ ಹಲವು ದಿನಗಳ ನಂತರ ಕೂಡಿದ್ದು, ಒಟ್ಟಿಗೆ ಊಟಕ್ಕೆ ಹೋಗಿದ್ದಾರೆ. ಅದಕ್ಕೆ ಮಾಧ್ಯಮದವರು ಭಿನ್ನಮತ ಎಂಬ ಬೇರೆ ಅರ್ಥವನ್ನು ಕಲ್ಪಿಸುವುದು ಬೇಡ ಎಂದರು.

ABOUT THE AUTHOR

...view details