ಬೆಳಗಾವಿ: ಕೋವಿಡ್-19 ಪ್ರಕರಣಗಳು ದೃಢಪಟ್ಟಿರುವ ಹಿನ್ನೆಲೆ ಕೇಂದ್ರ ರಾಜ್ಯ ಖಾತೆ ರೈಲ್ವೆ ಸಚಿವ ಸುರೇಶ್ ಅಂಗಡಿ ನಿಷೇಧಿತ ಪ್ರದೇಶ ಎಂದು ಘೋಷಿಸಲಾಗಿರುವ ಹಿರೇಬಾಗೇವಾಡಿ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಕೊರೊನಾ ಸೋಂಕು ಪತ್ತೆ: ಹಿರೇಬಾಗೇವಾಡಿಗೆ ಸಚಿವ ಸುರೇಶ್ ಅಂಗಡಿ ಭೇಟಿ, ಪರಿಶೀಲನೆ - suresh angdi latest news
ಗ್ರಾಮದಲ್ಲಿ ಸೋಂಕು ಪತ್ತೆಯಾಗಿರುವುದರಿಂದ ಗ್ರಾಮಸ್ಥರು ಲಾಕ್ಡೌನ್ ಕಟ್ಟುನಿಟ್ಟಾಗಿ ಪಾಲಿಸುವುದರ ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಕೇಂದ್ರ ರಾಜ್ಯ ಖಾತೆ ರೈಲ್ವೆ ಸಚಿವ ಸುರೇಶ್ ಅಂಗಡಿ ಹೇಳಿದರು.
![ಕೊರೊನಾ ಸೋಂಕು ಪತ್ತೆ: ಹಿರೇಬಾಗೇವಾಡಿಗೆ ಸಚಿವ ಸುರೇಶ್ ಅಂಗಡಿ ಭೇಟಿ, ಪರಿಶೀಲನೆ central minister suresh angadi](https://etvbharatimages.akamaized.net/etvbharat/prod-images/768-512-6805981-135-6805981-1586960267108.jpg)
ಸಚಿವ ಸುರೇಶ್ ಅಂಗಡಿ
ಬಳಿಕ ಮಾತನಾಡಿದ ಅವರು, ಗ್ರಾಮದಲ್ಲಿ ಸೋಂಕು ಪತ್ತೆಯಾಗಿರುವುದರಿಂದ ಗ್ರಾಮಸ್ಥರು ಲಾಕ್ಡೌನ್ ಕಟ್ಟುನಿಟ್ಟಾಗಿ ಪಾಲಿಸುವುದರ ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದರು.
ಕಂಟೈನ್ಮೆಂಟ್ ಝೋನ್ ಎಂದು ಘೋಷಿಸಲ್ಪಟ್ಟಿರುವ ಗ್ರಾಮದಲ್ಲಿ ಸರ್ಕಾರದ ನಿರ್ದೇಶನದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಸೋಂಕು ಹರಡದಂತೆ ತಡೆಗಟ್ಟಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.