ಕರ್ನಾಟಕ

karnataka

ETV Bharat / state

ಎಸ್ ಎಸ್ ಎಲ್ ಸಿ  ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ ಕೇಂದ್ರ ಸಚಿವ ಸುರೇಶ್ ಅಂಗಡಿ

ಎಸ್ ಎಸ್ಎಲ್ ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಇಂದು ಕೇಂದ್ರ ರೈಲ್ವೆ ಇಲಾಖೆ ಸಹಾಯಕ ಸಚಿವ ಸುರೇಶ್ ಅಂಗಡಿ ಅವರು ಬೆಳಗಾವಿ ನಗರದ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

By

Published : Jun 24, 2020, 6:49 PM IST

Belgavi
Belgavi

ಬೆಳಗಾವಿ :ನಾಳೆಯಿಂದ ಎಸ್ಎಸ್ಎಲ್ ಸಿ ಪರೀಕ್ಷೆ ಆರಂಭವಾಗಲಿದ್ದು, ಇಂದು ಕೇಂದ್ರ ರೈಲ್ವೆ ಇಲಾಖೆ ಸಹಾಯಕ ಸಚಿವ ಸುರೇಶ್ ಅಂಗಡಿ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರೀಕ್ಷಾ ಸಿದ್ಧತೆ ಕುರಿತು ಪರಿಶೀಲನೆ ನಡೆಸಿದರು.

ನಗರದ ಸರ್ದಾರ ಪ್ರೌಢಶಾಲೆ, ಸೆಂಟ್ ಜೋಸೆಫ್ ಫ್ರೌಢ ಶಾಲೆ ಸೇರಿದಂತೆ ವಿವಿಧ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದರು.

ಈ ವೇಳೆ ಪರೀಕ್ಷಾ ಕೊಠಡಿಗಳಲ್ಲಿ ಸಾಮಾಜಿಕ ಅಂತರ, ಸ್ಯಾನಿಟೈಸರ್ ವ್ಯವಸ್ಥೆ, ಥರ್ಮಲ್ ಸ್ಕ್ಯಾನಿಂಗ್ ವ್ಯವಸ್ಥೆ ಕುರಿತಂತೆ ಡಿಡಿಪಿಐ ಎ. ಬಿ. ಪುಂಡಲೀಕ ಅವರಿಂದ ಮಾಹಿತಿ ಪಡೆದುಕೊಂಡರು. ಮಕ್ಕಳ ಸುರಕ್ಷತಾ ಕ್ರಮಗಳ ಕುರಿತು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಡಿಡಿಪಿಐಗೆ ಸೂಚನೆ ನೀಡಿದರು.

ಇನ್ನು ಜಿಲ್ಲೆಯಲ್ಲಿ 104 ಪರೀಕ್ಷಾ ಕೇಂದ್ರಗಳಿದ್ದು, ಹೆಚ್ಚುವರಿ 20 ಕೇಂದ್ರಗಳು ಸೇರಿ ಒಟ್ಟು 124 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಕೊರೊನಾ ಸೋಂಕು ಹರಡದಂತೆ ಎಲ್ಲಾ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ‌ ಎಂದು‌ ಡಿಡಿಪಿಐ ತಿಳಿಸಿದರು.

ABOUT THE AUTHOR

...view details