ಬೆಳಗಾವಿ: ಭೀಕರ ಪ್ರವಾಹಕ್ಕೆ ತುತ್ತಾಗಿರುವ ಚಿಕ್ಕೋಡಿ ತಾಲೂಕಿನ ಮಾಂಜರಿ ಸೇತುವೆಗೆ ಕೇಂದ್ರ ಅಧ್ಯಯನ ತಂಡದ ಸದಸ್ಯರು ಭೇಟಿ ನೀಡಿ ಪರಿಶೀಲಿಸಿದರು.
ಬೆಳಗಾವಿಯಲ್ಲಿ ಕೇಂದ್ರ ಅಧ್ಯಯನ ತಂಡದಿಂದ ನೆರೆ ಪೀಡಿತ ಪ್ರದೇಶಗಳ ಪರಿಶೀಲನೆ - belagavi flood
ರಾಜ್ಯದಲ್ಲಿನ ನೆರೆ ಪೀಡಿತ ಪ್ರದೇಶಗಳಿಗೆ ಕೇಂದ್ರ ಅಧ್ಯಯನ ತಂಡ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳುತ್ತಿದೆ.
![ಬೆಳಗಾವಿಯಲ್ಲಿ ಕೇಂದ್ರ ಅಧ್ಯಯನ ತಂಡದಿಂದ ನೆರೆ ಪೀಡಿತ ಪ್ರದೇಶಗಳ ಪರಿಶೀಲನೆ](https://etvbharatimages.akamaized.net/etvbharat/prod-images/768-512-4239211-thumbnail-3x2-vis.jpg)
ಕೇಂದ್ರ ಅಧ್ಯಯನ ತಂಡ
ಕೇಂದ್ರ ಅಧ್ಯಯನ ತಂಡ
ಜಿಲ್ಲಾಧಿಕಾರಿ ಎಸ್.ಬಿ.ಬೊಮ್ಮನಹಳ್ಳಿ ನೆರೆಯಿಂದ ಆಗಿರುವ ಅಪಾರ ಪ್ರಮಾಣದ ಹಾನಿಯ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಕೇಂದ್ರದಿಂದ ಮೂರು ಸದಸ್ಯರ ತಂಡ ಇಂದು ಜಿಲ್ಲೆಗೆ ಆಗಮಿಸಿದ್ದು, ನೆರೆ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿ ಮಾಹಿತಿ ಪಡೆದರು.
ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಅನೇಕ ಭಾಗಗಳಲ್ಲಿ ಭೇಟಿ ನೀಡಿದ ಕೇಂದ್ರ ತಂಡಕ್ಕೆ ಡಿಸಿ ಜೊತೆ ವಿಧಾನ ಪರಿಷತ್ ಸದಸ್ಯ ಮಹಾಂತೇಶ್ ಕವಠಗಿಮಠ ಸಾಥ್ ನೀಡಿದರು.