ಚಿಕ್ಕೋಡಿ :ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಬಡಕುಂದ್ರಿ ಗ್ರಾಮದ ಪ್ರವಾಹ ಪೀಡಿತ ಸ್ಥಳಗಳಿಗೆ ಕೇಂದ್ರ ಅಧ್ಯಯನ ತಂಡದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರವಾಹ ಪೀಡಿತ ಸ್ಥಳಗಳಿಗೆ ಕೇಂದ್ರ ಅಧ್ಯಯನ ತಂಡ ಭೇಟಿ, ಪರಿಶೀಲನೆ.. - chikkodi flood news 2020
ಸ್ಥಳೀಯ ಕೃಷಿ ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ಪರಿಶೀಲನೆ ನಡೆಯುತ್ತಿದ್ದು, ಬೆಳಗಾವಿ ಜಿಲ್ಲಾಧಿಕಾರಿ ಎಂ ಜಿ ಹಿರೇಮಠ ಹಾಗೂ ಎಂಎಲ್‌ಸಿ ಮಹಾಂತೇಶ ಕವಟಗಿಮಠ ಸಾಥ್..
ಪ್ರವಾಹ ಪೀಡಿತ ಸ್ಥಳಗಳಿಗೆ ಕೇಂದ್ರ ಅಧ್ಯಯನ ತಂಡ ಭೇಟಿ
ಕೃಷ್ಣಾ, ದೂದ್‌ಗಂಗಾ, ವೇದಗಂಗಾ ಹಾಗೂ ಹಿರಣ್ಯಕೇಶಿ ನದಿಗಳ ಪ್ರವಾಹದಿಂದ ಉಂಟಾಗಿರುವ ನೆರೆ ಹಾನಿಯನ್ನು ಹಾಗೂ ಚಿಕ್ಕೋಡಿ ವ್ಯಾಪ್ತಿಯ ಹಿರಣ್ಯಕೇಶಿ ನದಿ ಪ್ರವಾಹದಿಂದ ಉಂಟಾದ ಬೆಳೆ ಹಾನಿ ವೀಕ್ಷಣೆ ಮತ್ತು ಬೆಳೆ ಬೆಳೆಯಲು ತಗುಲಿದ ಖರ್ಚಿನ ಕುರಿತು ರೈತರಿಂದ ಎಣ್ಣೆ ಬೀಜ ಮಂಡಳಿಯ ನಿರ್ದೇಶಕ ಡಾ. ಮನೋಹರನ್ ನೇತೃತ್ವದ ತಂಡ ಮಾಹಿತಿ ಪಡೆಯಿತು.
ಸ್ಥಳೀಯ ಕೃಷಿ ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ಪರಿಶೀಲನೆ ನಡೆಯುತ್ತಿದ್ದು, ಬೆಳಗಾವಿ ಜಿಲ್ಲಾಧಿಕಾರಿ ಎಂ ಜಿ ಹಿರೇಮಠ ಹಾಗೂ ಎಂಎಲ್‌ಸಿ ಮಹಾಂತೇಶ ಕವಟಗಿಮಠ ಸಾಥ್ ನೀಡಿದರು.