ಚಿಕ್ಕೋಡಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಚಿಕ್ಕೋಡಿ ಲೋಕಸಭೆಯ ಒಟ್ಟು 8 ವಿಧಾನಸಭಾ ಮತಕ್ಷೇತ್ರದ ಮತದಾರರು ಮತದಾನ ಮಾಡದೆ ಚುನಾವಣೆ ಬಹಿಷ್ಕಾರ ಮಾಡುವಂತೆ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಬಿ.ಆರ್.ಸಂಗಪ್ಪಗೋಳ ಹೇಳಿದರು.
ಮತದಾನ ಬಹಿಷ್ಕಾರಕ್ಕೆ ನಿರ್ಧಾರ ಮಾಡಿದ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ - ಹೋರಾಟ ಸಮಿತಿ
ಚಿಕ್ಕೋಡಿಯನ್ನು ಜಿಲ್ಲೆಯನ್ನಾಗಿ ಮಾಡಬೇಕೆಂಬ ಕೋರಿಕೆ ಈಡೇರದ ಹಿನ್ನೆಲೆ ರಾಜಕರಣಿಗಳ ಮೇಲೆ ಆಕ್ರೋಶ ವ್ಯಕ್ತಪಡಿಸಿ ಚುನಾವಣೆ ಬಹಿಷ್ಕಾರ ಮಾಡಬೇಕೆಂದು ಮತದಾರರಿಗೆ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಬಿ.ಆರ್.ಸಂಗಪ್ಪಗೋಳ ಹೇಳಿದರು.
ನಗರದದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿಕ್ಕೋಡಿ ಜಿಲ್ಲೆ ಆಗಬೇಕೆಂದು ಹಲವಾರು ವರ್ಷಗಳಿಂದ ಈ ಭಾಗದ ಜನರು ಹೋರಾಟ ಮಾಡುತ್ತಾ ಬಂದಿದ್ದಾರೆ. ಆದರೆ, ಇಲ್ಲಿನ ಜನಪ್ರತಿನಿಧಿಗಳು ಮಾತ್ರ ಸುಳ್ಳು ಭರವಸೆಗಳನ್ನು ನೀಡುತ್ತಾ ಚಿಕ್ಕೋಡಿ ಜಿಲ್ಲೆ ಮಾಡುವಲ್ಲಿ ಶ್ರಮಿಸುತ್ತೇವೆ ಅಂತಾ ಹೇಳುತ್ತಾ ಬರುತ್ತಿದ್ದಾರೆ. ಈ ರಾಜಕಾರಣಿಗಳು ಸುಳ್ಳು ಹೇಳೊದ್ರಲ್ಲಿ ಪಿಹೆಚ್ಡಿ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರ ಕಡ್ಡಾಯವಾಗಿ ಮತದಾನ ಮಾಡುವಂತೆ ಹೇಳುತ್ತದೆ. ಆದರೆ, ಈ ಬಾರಿ ಚಿಕ್ಕೋಡಿ ಲೋಕಸಭೆಗೆ ಸೇರುವ ಎಲ್ಲ ವಿಧಾನಸಭಾ ಮತಕ್ಷೇತ್ರದ ಮತದಾರರ ಮನೆಗೆ ತೆರಳಿ ಮತದಾನ ಮಾಡಬೇಡಿ ಎಂದು ಹೇಳುತ್ತೇವೆ ಎಂದು ಹೇಳಿದರು.