ಬೆಳಗಾವಿ: ನಗರದ ಜಿಲ್ಲಾ ಪಂಚಾಯತಿ ಆವರಣದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆಯುತ್ತಿರುವ ಪ್ರವಾಹ ಪರಿಹಾರ ಕಾರ್ಯಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳು ಮೊಬೈಲ್ನಲ್ಲಿ ಬ್ಯೂಸಿಯಾಗಿದ್ದ ದೃಶ್ಯ ಸಾಮಾನ್ಯವಾಗಿತ್ತು.
ಇತ್ತ ಮುಖ್ಯಮಂತ್ರಿಗಳ ನೆರೆ ಪರಿಹಾರ ಕುರಿತು ಸಭೆ: ಅತ್ತ ಅಧಿಕಾರಿಗಳು ಮೊಬೈಲ್ನಲ್ಲಿ ಫುಲ್ ಬ್ಯುಸಿ! - Officers busy in Mobile Chat
ಮುಖ್ಯಮಂತ್ರಿಗಳ ಪರಿಹಾರ ಪ್ರಗತಿ ಪರಿಶೀಲನಾ ಸಭೆಯಲ್ಲಿ ಹಲವು ಅಧಿಕಾರಿಗಳು ಮೊಬೈಲ್ನಲ್ಲಿ ಬ್ಯುಸಿಯಾಗಿದ್ದು ಕಂಡುಬಂತು.
ಇತ್ತ ಮುಖ್ಯಮಂತ್ರಿಗಳು ನೆರೆ ಪರಿಹಾರ ಪ್ರಗತಿ ಪರಿಶೀಲನಾ ಸಭೆ ನಡೆಸುತ್ತಿದ್ದರೆ ಅತ್ತ ಹಲವು ಅಧಿಕಾರಿಗಳು ಮೊಬೈಲ್ನಲ್ಲಿ ಬ್ಯುಸಿಯಾಗಿದ್ದು ಕಂಡುಬಂತು. ಜನರ ಸಮಸ್ಯೆಗಳನ್ನು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿ ಕೊಡದೆ ಕೇವಲ ಕಾಟಾಚಾರಕ್ಕೆ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಂತಿದೆ ಎಂಬ ಮಾತುಗಳು ಕೂಡ ಕೇಳಿಬಂದವು.
ಕೇಂದ್ರ, ರಾಜ್ಯ ಸರ್ಕಾರಗಳಿಂದ ಸಕಾಲಕ್ಕೆ ನೆರವು ಸಿಗದೆ ಜನರು ಈಗಾಗಲೇ ಕಂಗಾಲಾಗಿದ್ದಾರೆ. ಹಲವೆಡೆ ಈ ನಿರ್ಲಕ್ಷ್ಯದ ವಿರುದ್ಧ ಜನ ದನಿ ಎತ್ತುತ್ತಿದ್ದಾರೆ. ಇನ್ನು ಸಿಎಂ ಕರೆದ ಸಭೆಯಲ್ಲೂ ಅಧಿಕಾರಿಗಳು ಕರ್ತವ್ಯ ಮರೆತು ಬೇಜವಾಬ್ದಾರಿ ಮೆರೆದಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.