ಚಿಕ್ಕೋಡಿ: ಎಪಿಎಂಸಿ, ಭೂ ಸುಧಾರಣೆ ತಿದ್ದುಪಡಿ ಕಾಯ್ದೆಯು ರೈತರಿಗೆ ಮಾರಕವಾಗಿದ್ದು, ಈ ಕೂಡಲೇ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ರೈತರು ವಿನೂತನವಾಗಿ ಪ್ರತಿಭಟಿಸಿದರು.
ಎಪಿಎಂಸಿ, ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರುದ್ಧ ಚಿಕ್ಕೋಡಿಯಲ್ಲಿ ರೈತರ ಪ್ರೊಟೆಸ್ಟ್
ರೈತ ವಿರೋಧಿ ಮಸೂದೆ ಹಾಗೂ ಕಾಯ್ದೆಗಳನ್ನು ಕೈ ಬಿಡುವಂತೆ ಚಿಕ್ಕೋಡಿಯಲ್ಲಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು.
ನಗರದ ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆದು ಪ್ರತಿಭಟಿಸಿದರು. ರೈತ ಸಂಘಟನೆಗಳಿಗೆ ವಿವಿಧ ಕನ್ನಡಪರ, ದಲಿತ ಸಂಘರ್ಷ ಸಮಿತಿ ಹಾಗೂ ಕಾರ್ಮಿಕ ಮತ್ತು ಮಹಿಳಾ ಸಂಘಟನೆಗಳು ಬೆಂಬಲ ನೀಡಿದವು. ಬಸವೇಶ್ವರ ತಾಲೂಕಿನಲ್ಲಿ ಅಥಣಿ, ನಿಪ್ಪಾಣಿ ಹುಕ್ಕೇರಿ ತಾಲೂಕಿನ ರೈತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು, ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ರೈತ ವಿರೋಧಿ ಮಸೂದೆ ಹಾಗೂ ಕಾಯ್ದೆಗಳನ್ನು ಕೈ ಬಿಡುವಂತೆ ಸರ್ಕಾರಕ್ಕೆ ಆಗ್ರಹಿಸಿದ ರೈತರು ಪ್ರತಿಭಟನೆಯ ನಂತರ ತಹಶೀಲ್ದಾರರ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಕೆ ಮಾಡಿದರು.