ಚಿಕ್ಕೋಡಿ (ಬೆಳಗಾವಿ): ಕೊರೊನಾ ಭೀತಿ ನಡುವೆಯೂ ಇಂದು ರಾಜ್ಯಾದ್ಯಂತ ಎಸ್ಎಸ್ಎಲ್‌ಸಿ ಪರೀಕ್ಷೆಗಳು ಆರಂಭವಾಗುತ್ತಿದೆ. ಶಿಕ್ಷಣ ಇಲಾಖೆ ಕೂಡಾ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಮಾಡಿಕೊಂಡಿದೆ. ಕೊರೊನಾ ವೈರಸ್ ಕಾರಣದಿಂದ ಏಪ್ರಿಲ್ನಲ್ಲಿ ನಡೆಯಬೇಕಿದ್ದ ಎಸ್ಎಸ್ಎಲ್‌ಸಿ ಪರೀಕ್ಷೆಯನ್ನು ಮುಂದೂಡಲಾಗಿತ್ತು.
ಸಾಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷೆ ಬರೆಯಲು ಸಿದ್ಧರಾದ ಎಸ್ಎಸ್ಎಲ್‌ಸಿ ವಿದ್ಯಾರ್ಥಿಗಳು - Chikkodi SSLC exam 2020
ಇಂದು ರಾಜ್ಯಾದ್ಯಂತ 10 ನೇ ತರಗತಿ ಪರೀಕ್ಷೆಗಳು ಆರಂಭವಾಗುತ್ತಿದ್ದು ವಿದ್ಯಾರ್ಥಿಗಳು ಸಾಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷೆ ಬರೆಯಲು ಸಿದ್ಧರಾಗಿದ್ದಾರೆ.
ವಿದ್ಯಾರ್ಥಿಗಳು ಕೂಡಾ ಸಾಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷೆ ಬರೆಯಲು ಮುಂದಾಗಿದ್ದಾರೆ. ಪರೀಕ್ಷೆಗಾಗಿ ಈ ಬಾರಿ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ132 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಚಿಕ್ಕೋಡಿ ಪಟ್ಟಣದ ಆರ್.ಡಿ ಹೈಸ್ಕೂಲ್ಗೆ ಪರೀಕ್ಷೆ ಬರೆಯಲು ಬರುತ್ತಿರುವ ವಿದ್ಯಾರ್ಥಿಗಳಿಗೆ ಮುನ್ನೆಚ್ಚರಿಕೆ ಕ್ರಮವಾಗಿ ಸ್ಕ್ರೀನಿಂಗ್ ಮಾಡಿ ಮಾಸ್ಕ್, ಸ್ಯಾನಿಟೈಸರ್ ನೀಡಲಾಗಿದೆ.
ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಒಟ್ಟು 8 ಪರೀಕ್ಷಾ ವಲಯಗಳಿದ್ದು 40,781 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಮಹಾರಾಷ್ಟ್ರದಿಂದ ಕೂಡಾ 49 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಬರಲಿದ್ದು ಅವರಿಗೆ ಕರ್ನಾಟಕದ ಗಡಿಯಿಂದ ಬರಲು ಕೆಎಸ್‌ಆರ್‌ಟಿಸಿ ವತಿಯಿಂದ ಬಸ್ ವ್ಯವಸ್ಥೆ ಮಾಡಲಾಗಿದೆ. ವಿದ್ಯಾರ್ಥಿಗಳು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ನೋಡಿಕೊಳ್ಳಲು ಶಾಲೆಯ ಪ್ರವೇಶ ದ್ವಾರದಲ್ಲಿ ಆಶಾ ಕಾರ್ಯಕರ್ತೆಯರು ಹಾಗೂ ಶಾಲಾ ಸಿಬ್ಬಂದಿಯನ್ನು ವ್ಯವಸ್ಥೆ ಮಾಡಲಾಗಿದೆ.