ಕರ್ನಾಟಕ

karnataka

ETV Bharat / state

ಬೆಳಗಾವಿಯಲ್ಲಿ ಮಹಾಮಾರಿ ಡೆಂಗ್ಯೂಗೆ ಬಾಲಕ ಬಲಿ - ಬೆಳಗಾವಿಯಲ್ಲಿ ಡೆಂಗ್ಯೂಗೆ ಬಾಲಕ ಬಲಿ

ಕೊರೊನಾ ಮಧ್ಯೆ ಬೆಳಗಾವಿಯಲ್ಲಿ ಡೆಂಗ್ಯೂ ಜ್ವರಕ್ಕೆ ಬಾಲಕನೋರ್ವ ಬಲಿಯಾಗಿದ್ದಾನೆ. ಕಳೆದ ಕೆಲವು ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಈತ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.

Child death for dengue in Belgaum
ಬೆಳಗಾವಿಯಲ್ಲಿ ಡೆಂಗ್ಯೂಗೆ ಬಾಲಕ ಬಲಿ

By

Published : Jul 6, 2020, 6:33 AM IST

ಬೆಳಗಾವಿ: ಆರನೇ ತರಗತಿಯ ವಿದ್ಯಾರ್ಥಿಯೋರ್ವ ಮಹಾಮಾರಿ ಡೆಂಗ್ಯೂಗೆ ಬಲಿಯಾದ ಘಟನೆ ತಾಲೂಕಿನ ವಡಗಾವಿಯಲ್ಲಿ ನಡೆದಿದೆ.

ಬೆಳಗಾವಿಯ ವಡಗಾವಿ ವಿಷ್ಣು ಗಲ್ಲಿ ನಿವಾಸಿ ವರದ್ ಪಾಟೀಲ್ (12) ಎಂಬ ಬಾಲಕ ಡೆಂಗ್ಯೂ ಜ್ವರದಿಂದ ಸಾವನ್ನಪ್ಪಿದ್ದಾನೆ. ಈತ ಕೆಎಲ್ಎಸ್ ಶಾಲೆಯ ಆರನೇ ತರಗತಿ ವಿದ್ಯಾರ್ಥಿಯಾಗಿದ್ದ. ಕಳೆದ ಕೆಲವು ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.

ಕೊರೊನಾ ವೈರಸ್ ಆತಂಕದ ನಡುವೆ ಡೆಂಗ್ಯೂಗೆ ಬಾಲಕ ಬಲಿಯಾಗಿದ್ದು, ಮಹಾನಗರ ಪಾಲಿಕೆಯ ಆರೋಗ್ಯ ವಿಭಾಗದ ಅಧಿಕಾರಿಗಳು ಇನ್ನಾದರೂ ಎಚ್ಚೆತ್ತುಕೊಂಡು ನಗರದಲ್ಲಿ ಸ್ವಚ್ಛತೆ ಕಾಪಾಡಬೇಕಿದೆ.

ABOUT THE AUTHOR

...view details