ಚಿಕ್ಕೋಡಿ :ಕೊರೊನಾ ವೈರಸ್ ಭೀತಿ ಹಿನ್ನೆಲೆಉತ್ತರ ಕರ್ನಾಟಕ ಹಾಗೂ ದಕ್ಷಿಣ ಮಹಾರಾಷ್ಟ್ರದ ಶಕ್ತಿ ದೇವತೆಯಾಗಿರುವ ಮಾಯಕ್ಕಾದೇವಿ ದೇವಸ್ಥಾನವನ್ನು ಜೂನ್ 30 ರ ವರೆಗೆ ತೆರೆಯದಿರಲು ದೇವಸ್ಥಾನ ಸಮಿತಿ ನಿರ್ಧರಿಸಿದೆ.
ಜೂ. 30 ರ ವರೆಗೆ ಬಂದ್ ಇರಲಿದೆ ಚಿಂಚಲಿ ಮಾಯಕ್ಕ ದೇವಸ್ಥಾನ !!
ಬೆಳಗಾವಿಯ ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣದಲ್ಲಿರುವ ಮಾಯಕ್ಕ ದೇವಸ್ಥಾನಕ್ಕೆ ಕರ್ನಾಟಕ-ಮಹಾರಾಷ್ಟ್ರದಿಂದ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಇದರಿಂದ ಕೊರೊನಾ ಹರಡುವ ಭೀತಿ ಹೆಚ್ಚಾಗಿರುವುದರಿಂದ ಜೂನ್ ಅಂತ್ಯದವರೆಗೆ ದೇವಸ್ಥಾನ ತೆರೆಯದಿರಲು ನಿರ್ಧರಿಸಲಾಗಿದೆ.
ಜೂನ್.30 ರ ವರೆಗೆ ಬಂದ್ ಇರಲಿದೆ ಚಿಂಚಲಿ ಮಾಯಕ್ಕ ದೇವಿ ದೇವಸ್ಥಾನ
ಜಿಲ್ಲೆಯ ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣದಲ್ಲಿರುವ ಈ ದೇವಸ್ಥಾನಕ್ಕೆ, ಕರ್ನಾಟಕ-ಮಹಾರಾಷ್ಟ್ರದಿಂದ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಇದರಿಂದ ಕೊರೊನಾ ಹರಡುವ ಭೀತಿ ಹೆಚ್ಚಾಗಿರುವುದರಿಂದ ಜೂನ್ ಅಂತ್ಯದವರೆಗೆ ದೇವಸ್ಥಾನ ತೆರೆಯದಿರಲು ನಿರ್ಧರಿಸಲಾಗಿದೆ.
ಭಕ್ತರು ತಮ್ಮ ಮನೆಯಲ್ಲಿಯೇ ದೇವಿಯ ಆರಾಧನೆ, ಪೂಜೆ ಮಾಡಿ ಕೊರೊನಾ ತಡೆಗಟ್ಟಲು ಸಹಕರಿಸಿ ಎಂದು ಆಡಳಿತ ಮಂಡಳಿ ಮನವಿ ಮಾಡಿಕೊಂಡಿದೆ.