ಕರ್ನಾಟಕ

karnataka

ETV Bharat / state

ನೆರೆ ಸಂತ್ರಸ್ತರಿಗೆ ಸಹಾಯ ನೀಡಿದ ಸುಧಾಮೂರ್ತಿಗೆ ಸಿಎಂ ಧನ್ಯವಾದ: ದಾನಿಗಳಿಗೆ ಆಹ್ವಾನ ನೀಡಿದ ಬಿಎಸ್​ವೈ - ಇನ್ಫೋಸಿಸ್ ಸಂಸ್ಥೆ

ಪ್ರವಾಹ ಪೀಡಿತ ಜನರಿಗೆ ಪುನರ್ವಸತಿ ಕಲ್ಪಿಸಲು 10 ಕೋಟಿ ರೂಪಾಯಿಗಳನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿರುವ ಇನ್ಫೋಸಿಸ್ ಸಂಸ್ಥೆಯ ಸುಧಾಮೂರ್ತಿ ಅವರಿಗೆ ಸಿಎಂ ಧನ್ಯವಾದ ಸಲ್ಲಿಸಿದ್ದಾರೆ. ಅಲ್ಲದೆ, ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲು ದಾನಿಗಳು ಮುಂದಾಗಬೇಕು ಎಂದು ಮನವಿ ಮಾಡಿದ್ದಾರೆ.

ಎನ್​ಡಿಆರ್​ಎಫ್​ ಕಾರ್ಯಕ್ಕೆ ಸಿಎಂ ಶ್ಲಾಘನೆ

By

Published : Aug 8, 2019, 10:44 PM IST

ಬೆಳಗಾವಿ:ಪ್ರವಾಹಕ್ಕೆ ಸಿಲುಕಿ ಬೆಳಗಾವಿ ತಾಲೂಕಿನ ಕಬಲಾಪುರ ಗ್ರಾಮದ ಮನೆಯೊಂದರ ಮೇಲೆ ಸುಮಾರು 40 ತಾಸುಗಳಿಂದ ಕುಳಿತಿದ್ದ ಕಾಡಪ್ಪ-ರತ್ನವ್ವ ದಂಪತಿಯನ್ನು ರಕ್ಷಿಸಿರುವುದಕ್ಕೆ ಮುಖ್ಯಮಂತ್ರಿ ಬಿ‌.ಎಸ್. ಯಡಿಯೂರಪ್ಪ ಸಂತಸ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ಆಸಕ್ತಿಯಿಂದಾಗಿ ಎರಡು ವಿಶೇಷ ಹೆಲಿಕಾಪ್ಟರ್ ಬಂದಿದ್ದು, ರಕ್ಷಣಾ ಕಾರ್ಯಕ್ಕಾಗಿ ಬೆಳಗಾವಿಯಲ್ಲಿ ನಿಯೋಜಿಸಲಾಗಿದೆ ಎಂದರು. ಇನ್ನೂ ಹೆಚ್ಚಿನ ರಕ್ಷಣಾ ದೋಣಿ ಹಾಗೂ ಹೆಲಿಕಾಪ್ಟರ್ ಒದಗಿಸುವ ಮೂಲಕ ರಕ್ಷಣಾ ಕಾರ್ಯಾಚರಣೆ ಮತ್ತಷ್ಟು ಚುರುಕುಗೊಳಿಸಲಾಗುವುದು. ಜನರು ಎಲ್ಲೇ ಸಂಕಷ್ಟದಲ್ಲಿದ್ದರೂ ಅವರ ರಕ್ಷಣೆ. ಮುಂಬರುವ ದಿನಗಳಲ್ಲಿ ಮನೆ ನೀಡಲಾಗುವುದು ಎಂದು ಭರವಸೆ ನೀಡಿದರು.

ಸುಧಾಮೂರ್ತಿಗೆ ಧನ್ಯವಾದ; ದಾನಿಗಳಿಗೆ ಆಹ್ವಾನ:

ಪ್ರವಾಹ ಪೀಡಿತ ಜನರಿಗೆ ಪುನರ್ವಸತಿ ಕಲ್ಪಿಸಲು ಹತ್ತು ಕೋಟಿ ರೂಪಾಯಿಗಳನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿರುವ ಇನ್ಫೋಸಿಸ್ ಸಂಸ್ಥೆಯ ಸುಧಾಮೂರ್ತಿ ಅವರಿಗೆ ಮುಖ್ಯಮಂತ್ರಿಗಳು ಧನ್ಯವಾದಗಳನ್ನು ಸಲ್ಲಿಸಿದರು.

ಅದೇ ರೀತಿಯಲ್ಲಿ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲು ದಾನಿಗಳು ಮುಂದಾಗಬೇಕು ಎಂದು ಮನವಿ ಮಾಡಿಕೊಂಡರು. 2005 ರಲ್ಲಿ ಇದೇ ರೀತಿ ಪ್ರವಾಹ ಬಂದಾಗ ದಾನಿಗಳು 1500 ಕೋಟಿ ರೂಪಾಯಿಗಳ ದೇಣಿಗೆ ನೀಡುವ ಮೂಲಕ ಸಂತ್ರಸ್ತರಿಗೆ ಆಸರೆಯಾಗಿದ್ದರು. ಸುಧಾಮೂರ್ತಿ ಅವರು ಹತ್ತು ಕೋಟಿ ನೀಡುವ ಮೂಲಕ ಉಳಿದ ದಾನಿಗಳಿಗೆ ಸ್ಫೂರ್ತಿಯಾಗಿದ್ದಾರೆ ಎಂದರು.

ABOUT THE AUTHOR

...view details