ಕರ್ನಾಟಕ

karnataka

ETV Bharat / state

ಬೆಳಗಾವಿ ಉಪಸಮರ: ನೂರಕ್ಕೆ ನೂರು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ಸಿಎಂ - c m reaction on belgavi by election

ಬೆಳಗಾವಿ ಉಪಸಮರದಲ್ಲಿ ಗೆಲ್ಲುವ ವಿಶ್ವಾಸವನ್ನು ಮುಖ್ಯಮಂತ್ರಿ ಯಡಿಯೂರಪ್ಪ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಸಿಡಿ ಪ್ರಕರಣದ ಯುವತಿ ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಿರುವ ವಿಚಾರದ ಬಗ್ಗೆ ನನಗೆ ಮಾಹಿತಿ ಇಲ್ಲ. ನಾನು ಏನು ನೋಡಿಲ್ಲ ಎಂದು ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.

cm b s yadiyurappa
ಸಿಎಂ ಬಿ.ಎಸ್. ಯಡಿಯೂರಪ್ಪ

By

Published : Mar 30, 2021, 7:13 PM IST

ಬೆಳಗಾವಿ: ವಿವಿಧ ಸಮುದಾಯಗಳ ಪ್ರಮುಖರ ಸಭೆ ನಡೆಸಿದ್ದೇನೆ. ಎಲ್ಲಾ ಸಮುದಾಯದವರು ನಮ್ಮನ್ನು ಬೆಂಬಲಿಸಿದ್ದಾರೆ. ಮತ್ತೆ ಏ. 07ರಂದು ಪ್ರಚಾರಕ್ಕೆ ಬರುತ್ತೇನೆ. ಬೆಳಗಾವಿಯಲ್ಲಿ ನೂರಕ್ಕೆ ನೂರು ಗೆಲ್ಲುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಸಿಎಂ ಯಡಿಯೂರಪ್ಪ

ನಗರದ ಖಾಸಗಿ ಹೋಟೆಲ್​ನಲ್ಲಿ ವಿವಿಧ ಸಮುದಾಯದ ಮುಖಂಡರುಗಳನ್ನು ಆಹ್ವಾನಿಸಿದ್ದೆ‌. ನೇಕಾರ, ಕುರುಬ, ಮರಾಠ ಸಮುದಾಯದ ಮುಖಂಡರು ಸಭೆಗೆ ಬಂದಿದ್ದರು‌. ಎಲ್ಲರೂ ಸಹ ದಿ. ಸುರೇಶ ಅಂಗಡಿ ಅವರ ಬಗ್ಗೆ ಗೌರವ ವ್ಯಕ್ತಪಡಿಸಿದ್ದಾರೆ ಎಂದರು.

ಅಂಗಡಿ ಅವರ ಧರ್ಮಪತ್ನಿ ಪರ ದೊಡ್ಡ ಪ್ರಮಾಣದಲ್ಲಿ ಒಗ್ಗಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಭರವಸೆ ಕೊಟ್ಟಿದ್ದಾರೆ. ನನ್ನ ಪ್ರಕಾರ ನಮ್ಮ ಅಭ್ಯರ್ಥಿ ಕನಿಷ್ಠ ಪಕ್ಷ ಮೂರು ಲಕ್ಷ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ಸಿಎಂ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ:ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದೇ ಗೆಲ್ಲುತ್ತೆ: ಡಿಸಿಎಂ ಗೋವಿಂದ ಕಾರಜೋಳ

ಸಿಡಿ ಪ್ರಕರಣದ ಯುವತಿ ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಿರುವ ವಿಚಾರಕ್ಕೆ, ಈ ಬಗ್ಗೆ ನನಗೆ ಮಾಹಿತಿ ಇಲ್ಲ. ನಾನು ಏನು ನೋಡಿಲ್ಲ ಎಂದು ಸಿಡಿ ವಿಚಾರದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದೆ ತೆರಳಿದರು. ಬೆಳಗಾವಿಯಿಂದ ರಸ್ತೆ ಮಾರ್ಗದ ಮೂಲಕ ಹುಬ್ಬಳ್ಳಿಗೆ ತಲುಪಿ ಅಲ್ಲಿಂದ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದರು.

ABOUT THE AUTHOR

...view details