ಕರ್ನಾಟಕ

karnataka

ETV Bharat / state

ರೋಹಿತ್​ ಚಕ್ರತೀರ್ಥ ಸಮಿತಿ ವಿಸರ್ಜನೆ, ಪರಿಷ್ಕೃತ ಪಠ್ಯದಲ್ಲಿ ಆಕ್ಷೇಪಾರ್ಹವಿದ್ದಲ್ಲಿ ಪರಿಷ್ಕರಣೆಗೆ ಸಿದ್ಧ: ವಿವಾದಕ್ಕೆ ತೆರೆ ಎಳೆದ ಸಿಎಂ! - ರೋಹಿತ್ ಚಕ್ರತೀರ್ಥ ಸಮಿತಿ ವಿಸರ್ಜನೆ

ರೋಹಿತ್​ ಚಕ್ರತೀರ್ಥ ಸಮಿತಿ ವಿಸರ್ಜನೆ ಮಾಡಲಾಗಿದ್ದು, ಪರಿಷ್ಕೃತ ಪಠ್ಯದಲ್ಲಿ ಆಕ್ಷೇಪಾರ್ಹ ವಿಷಯವಿದ್ದಲ್ಲಿ ಮತ್ತೊಮ್ಮೆ ಪರಿಷ್ಕರಣೆಗೆ ಸಿದ್ದ ಎಂದು ಎದ್ದಿರುವ ವಿವಾದಕ್ಕೆ ಸಿಎಂ ಬೊಮ್ಮಾಯಿ ತೆರೆ ಎಳೆದಿದ್ದಾರೆ.

CM Bommai close up the textbook controversy, textbook controversy ended in Karnataka, Rohit Chakratirtha Samiti dissolution, Karnataka textbook news, ಪಠ್ಯಪುಸ್ತಕ ವಿವಾದಕ್ಕೆ ತೆರೆ ಎಳೆದ ಸಿಎಂ ಬೊಮ್ಮಾಯಿ, ಕರ್ನಾಟಕದಲ್ಲಿ ಅಂತ್ಯಗೊಂಡ ಪಠ್ಯಪುಸ್ತಕ ವಿವಾದ, ರೋಹಿತ್ ಚಕ್ರತೀರ್ಥ ಸಮಿತಿ ವಿಸರ್ಜನೆ, ಕರ್ನಾಟಕ ಪಠ್ಯಪುಸ್ತಕ ಸುದ್ದಿ,
ಪಠ್ಯಪುಸ್ತಕ ವಿವಾದಕ್ಕೆ ತೆರೆ ಎಳೆದ ಸಿಎಂ

By

Published : Jun 4, 2022, 6:35 AM IST

Updated : Jun 4, 2022, 7:02 AM IST

ಬೆಂಗಳೂರು:ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ಕಾರ್ಯ ಮುಗಿದಿರುವುದರಿಂದ ಸದರಿ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯನ್ನು ವಿಸರ್ಜಿಸಲಾಗಿದೆ. ಪ್ರಸ್ತುತ ಪರಿಷ್ಕರಿಸಿರುವ ಪಠ್ಯಪುಸ್ತಕದಲ್ಲಿ ಯಾವಾದಾದರೂ ಆಕ್ಷೇಪಾರ್ಹ ವಿಷಯಗಳಿದ್ದಲ್ಲಿ ಅವುಗಳನ್ನು ಮತ್ತೊಮ್ಮೆ ಪರಿಷ್ಕರಿಸುವ ಮುಕ್ತ ಮನಸ್ಸನ್ನು ಸರ್ಕಾರವು ಹೊಂದಿದೆ. ಈ ಹಿನ್ನೆಲೆ ಬಸವಣ್ಣನವರ ವಿಷಯಾಂಶಕ್ಕೆ ಸಂಬಂಧಿಸಿದಂತೆ ಸೂಕ್ತವಾಗಿ ಪರಿಷ್ಕರಿಸಲು ನಿರ್ಧಾರ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ರೇಸ್ ಕೋರ್ಸ್ ರಸ್ತೆಯಲ್ಲಿರುವ ಸಿಎಂ ಅಧಿಕೃತ ನಿವಾಸ ರೇಸ್ ವ್ಯೂ ಕಾಟೇಜ್​ಗೆ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಭೇಟಿ ನೀಡಿದರು. ಪರಿಷ್ಕೃತ ಪಠ್ಯ ಪುಸ್ತಕ ಗೊಂದಲದ ಬಗ್ಗೆ ಸಿಎಂ ಜೊತೆ ಶಿಕ್ಷಣ ಸಚಿವ ನಾಗೇಶ್ ಹಾಗು ಶಿಕ್ಷಣ ಇಲಾಖೆ ಕಾರ್ಯದರ್ಶಿ ಸೆಲ್ವ ಕುಮಾರ್ ಚರ್ಚೆ ನಡೆಸಿದರು. ಸಾಹಿತಿಗಳಿಂದ ಸರ್ಕಾರದ ಪ್ರತಿಷ್ಠಾನಗಳಿಗೆ ರಾಜೀನಾಮೆ, ಲೇಖನ ವಾಪಸ್​ಗೆ ಪತ್ರ ಬರೆದಿರುವುದು, ಕುವೆಂಪು, ನಾಡಗೀತೆಗೆ ಅಪಮಾನ ಆರೋಪ ಕುರಿತ ವಿವಾದ ಸೇರಿದಂತೆ ಪರಿಷ್ಕೃತ ಪಠ್ಯದ ಎದ್ದಿರುವ ಗೊಂದಲದ ಬಗ್ಗೆ ಶಿಕ್ಷಣ ಸಚಿವರು ಸಿಎಂಗೆ ವರದಿ ಸಲ್ಲಿಸಿದರು. ವರದಿ ಮೇಲೆ ಸಚಿವರು ಮತ್ತು ಅಧಿಕಾರಿಗಳ ಜೊತೆ ಸಿಎಂ ಸುದೀರ್ಘ ಸಭೆ ನಡೆಸಿ ಪಠ್ಯಪುಸ್ತಕ ಪರಿಷ್ಕರಣೆ ಕುರಿತು ಎದ್ದಿರುವ ವಿವಾದದ ಬಗ್ಗೆ ಸರ್ಕಾರದ ನಿರ್ಧಾರವನ್ನು ಪ್ರಕಟಿಸಿದರು‌.

ಪಠ್ಯಪುಸ್ತಕ ವಿವಾದಕ್ಕೆ ತೆರೆ ಎಳೆದ ಸಿಎಂ

ಶಾಲಾ ಶಿಕ್ಷಣದಲ್ಲಿ ಪಠ್ಯಕ್ರಮ ಮತ್ತು ಪಠ್ಯ ಪುಸ್ತಕಗಳನ್ನು ಕಾಲ ಕಾಲಕ್ಕೆ ತಕ್ಕಂತೆ ಪರಿಷ್ಕರಿಸಲಾಗುತ್ತದೆ. ರಾಜ್ಯದಲ್ಲಿ ಹಲವು ಬಾರಿ ಪಠ್ಯ ಪುಸ್ತಕಗಳನ್ನು ಪರಿಷ್ಕರಣೆ ಮಾಡಲಾಗಿದೆ. ಈ ಹಿಂದೆ ಜಾರಿಯಲ್ಲಿದ್ದ ಕೆಲವು ಪಠ್ಯಪುಸ್ತಕಗಳಲ್ಲಿ ಹಲವು ಆಕ್ಷೇಪಾರ್ಹ ಅಂಶಗಳು ಇದ್ದ ಕಾರಣ ಸಮಾಜ ವಿಜ್ಞಾನ ಹಾಗೂ ಕನ್ನಡ ಭಾಷಾ ವಿಷಯಗಳಿಗೆ ಸಂಬಂಧಿಸಿದಂತೆ ಪಠ್ಯ ಪುಸ್ತಕಗಳ ಅಲ್ಪ ಪರಿಷ್ಕರಣೆಯನ್ನು ಮಾಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಪತ್ರಿಕಾ ಹೇಳಿಕೆ ಮೂಲಕ ತಿಳಿಸಿದ್ದಾರೆ.

ಪಠ್ಯಪುಸ್ತಕ ವಿವಾದಕ್ಕೆ ತೆರೆ ಎಳೆದ ಸಿಎಂ

ಓದಿ:ಸರ್ಕಾರಕ್ಕೆ ಮತ್ತೊಂದು ಖಡಕ್​ ಪತ್ರ ಬರೆದ ಸಾಹಿತಿ ದೇವನೂರು ಮಹಾದೇವ

ಪಂಡಿತಾರಾಧ್ಯ ಸ್ವಾಮೀಜಿಗಳು ಹಾಗೂ ನಾಡಿನ ಇತರ ಸ್ವಾಮೀಜಿಗಳು ಪ್ರಸ್ತುತ ಪಠ್ಯ ಪುಸ್ತಕದಲ್ಲಿರುವ ಬಸವಣ್ಣನವರ ವಿಷಯಾಂಶಕ್ಕೆ ಸಂಬಂಧಿಸಿದಂತೆ ಕೆಲವು ಆಕ್ಷೇಪಣೆಗಳನ್ನು ಮಾಡಿದ್ದಾರೆ. ಬಸವಣ್ಣನವರ ಇದೇ ವಿಷಯಾಂಶಕ್ಕೆ ಸಂಬಂಧಿಸಿದಂತೆ ಈ ಹಿಂದೆ ಜಾರಿಯಲ್ಲಿದ್ದ ಪ್ರೊ.ಬರಗೂರು ರಾಮಚಂದ್ರಪ್ಪ ಇವರ ಸಮಿತಿಯಿಂದ ರಚಿತವಾದ ಪಠ್ಯಪುಸ್ತಕ ಹಾಗೂ ಪ್ರಸ್ತುತ ಪರಿಷ್ಕರಿಸಿರುವ ಪಠ್ಯಪುಸ್ತಕದಲ್ಲಿ ಸಾಮಾನ್ಯವಾದ ಅಂಶಗಳಿವೆ. ಪ್ರಸ್ತುತ ಪಠ್ಯಪುಸ್ತಕದಲ್ಲಿರುವ ಬಸವಣ್ಣನವರ ವಿಷಯಾಂಶವನ್ನು ಯಾರ ಭಾವನೆಗೂ ಧಕ್ಕೆ ಆಗದಂತೆ ಪರಿಷ್ಕರಿಸಲಾಗುವುದು ಎಂದು ಸಿಎಂ ಭರವಸೆ ನೀಡಿ ಲಿಂಗಾಯತ ಸಮುದಾಯದಲ್ಲಿ ಎದ್ದಿರುವ ಅಸಮಧಾನದ ಹೊಗೆ ಶಮನಗೊಳಿಸುವ ಪ್ರಯತ್ನ ಮಾಡಿದ್ದಾರೆ.

ಆದಿಚುಂಚನಗಿರಿ ಪೀಠದ ನಿರ್ಮಲಾನಂದ ಸ್ವಾಮೀಜಿಗಳು ಹಾಗೂ ಇತರರ ಆಶಯದಂತೆ ರಾಷ್ಟ್ರಕವಿ ಕುವೆಂಪುರವರು ವಿರಚಿತ ನಾಡಗೀತೆಯನ್ನು ವಿಕೃತಗೊಳಿಸುವ ರೀತಿಯಲ್ಲಿ ನಾಡಗೀತೆಯ ದಾಟಿಯಲ್ಲಿ ಮೂಲ ಕವನವನ್ನು ಬರೆದ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲು ಬೆಂಗಳೂರಿನ ಸೈಬರ್‌ ಕ್ರೈಮ್​ಗೆ ತನಿಖೆಯನ್ನು ನಡೆಸಲು ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಪಠ್ಯಪುಸ್ತಕ ಪರಿಷ್ಕರಣೆ ಸಂಬಂಧಿಸಿದಂತೆ ಬಂದಿರುವ ಆರೋಪ/ಆಕ್ಷೇಪಣೆಗಳಿಗೆ ಸ್ಪಷ್ಟೀಕರಣಗಳನ್ನು ಒಳಗೊಂಡ ಟಿಪ್ಪಣಿ ಲಗತ್ತಿಸಿದೆ. ಹಲವಾರು ಅಂಶಗಳಿಗೆ ವಾಸ್ತವ ಅಂಶಗಳಿಂದ ಸ್ಪಷ್ಟೀಕರಣವನ್ನು ಕೊಡಲಾಗಿದೆ. ಪ್ರಸ್ತುತ ಆಕ್ಷೇಪ ಮಾಡಿರುವಂತೆ ಮಹಾನ್‌ ವ್ಯಕ್ತಿಗಳ ಯಾವುದೇ ಪಾಠವನ್ನು ಕೈಬಿಡಲಾಗಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.

ಪಠ್ಯಪುಸ್ತಕ ಪರಿಷ್ಕರಣೆ ವಿವಾದದಲ್ಲಿ ಸರ್ಕಾರದ ನಿರ್ಧಾರಗಳು:

  • ಪ್ರಸ್ತುತ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ಕಾರ್ಯ ಮುಗಿದಿರುವುದರಿಂದ ಸದರಿ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯನ್ನು ವಿಸರ್ಜಿಸಿದೆ.
  • ಪ್ರಸ್ತುತ ಪರಿಷ್ಕರಿಸಿರುವ ಪಠ್ಯಪುಸ್ತಕದಲ್ಲಿ ಯಾವಾದಾದರೂ ಆಕ್ಷೇಪಾರ್ಹ ವಿಷಯಗಳಿದ್ದಲ್ಲಿ ಅವುಗಳನ್ನು ಮತ್ತೊಮ್ಮೆ ಪರಿಷ್ಕರಿಸುವ ಮುಕ್ತ ಮನಸ್ಸನ್ನು ಸರ್ಕಾರವು ಹೊಂದಿದೆ. ಈ ಹಿನ್ನೆಲೆ ಮೇಲೆ ತಿಳಿಸಿದಂತೆ ಬಸವಣ್ಣನವರ ವಿಷಯಾಂಶಕ್ಕೆ ಸಂಬಂಧಿಸಿದಂತೆ ಸೂಕ್ತವಾಗಿ ಪರಿಷ್ಕರಿಸಲು ನಿರ್ಧಾರ ಮಾಡಲಾಗಿದೆ.

ಓದಿ:ಪುಸ್ತಕದಲ್ಲಿ ಪಠ್ಯವಿಲ್ಲದಿದ್ದರೂ ಪತ್ರ ಬರೆಯುತ್ತಿದ್ದಾರೆ: ಸಚಿವ ಕೋಟ

  • ರಾಷ್ಟ್ರಕವಿ ಕುವೆಂಪು ಅವರ ನಾಡಗೀತೆಯನ್ನು ಆಕ್ಷೇಪಾರ್ಹವಾಗಿ ವಿಕೃತಿಗೊಳಿಸಿದ ಅಂಶವು ಪಠ್ಯಪುಸ್ತಕಗಳಲ್ಲಿ ಉಲ್ಲೇಖಗೊಳ್ಳದಿದ್ದರೂ, ಇದರ ಮೂಲಕವನ ಬರೆದ ವ್ಯಕ್ತಿಗಳ ಬಗ್ಗೆ ಕಾನೂನಾತ್ಮಕ ತನಿಖೆಯ ಕ್ರಮವನ್ನು ಸರ್ಕಾರವು ತೆಗೆದುಕೊಂಡಿದೆ.
  • ಪ್ರೊ.ಬರಗೂರು ರಾಮಚಂದ್ರಪ್ಪರವರ ಅಧ್ಯಕ್ಷತೆಯ ಸಮಿತಿಯು ರಚಿಸಿದ ಕನ್ನಡ ಭಾಷಾ ಪಠ್ಯಪುಸ್ತಕಗಳಲ್ಲಿ ರಾಷ್ಟ್ರಕವಿ ಕುವೆಂಪು ಅವರ ಕುರಿತಾದ 7 ಗದ್ಯ/ಪದ್ಯಗಳಿಗೆ ಸೀಮಿತವಾಗಿದ್ದನ್ನು, ಪ್ರಸ್ತುತ ಪರಿಷ್ಕರಣಾ ಸಮಿತಿ ರಚಿಸಿರುವ ಕನ್ನಡ ಭಾಷಾ ಪಠ್ಯಪುಸ್ತಕಗಳಲ್ಲಿ 10ಕ್ಕೇರಿಸಿದೆ.
  • ಪ್ರಸ್ತುತ ಪರಿಷ್ಕರಿಸಿರುವ ಪಠ್ಯಪುಸ್ತಕದಲ್ಲಿ ನಾಡಪ್ರಭು ಕೆಂಪೇಗೌಡರ ಕುರಿತಾದ ಪಾಠವನ್ನು ಹೊಸದಾಗಿ ಸೇರ್ಪಡೆ ಮಾಡಿದೆ.
  • ಈ ಹಿಂದಿನ ಪಠ್ಯಪುಸ್ತಕಗಳಲ್ಲಿ ಪರಿಚಯಿಸಲಾಗಿದ್ದ ಇಸ್ಲಾಂ ಮತ್ತು ಕ್ರೈಸ್ತ ಧರ್ಮದ ಜೊತೆ ಹಿಂದೂ ಧರ್ಮದ ವಿಷಯವನ್ನೂ ಸೇರ್ಪಡೆ ಮಾಡಿ ಪರಿಚಯಿಸಲಾಗಿದೆ ಎಂದು ಪತ್ರಿಕಾ ಹೇಳಿಕೆ ಮೂಲಕ ಸಿಎಂ ಸ್ಪಷ್ಟೀಕರಣ ನೀಡಿದ್ದಾರೆ.
Last Updated : Jun 4, 2022, 7:02 AM IST

For All Latest Updates

ABOUT THE AUTHOR

...view details